ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2021ನೇ ಸಾಲಿನ ವೈದ್ಯಕೀಯ, ದಂತವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳ ಪ್ರವೇಶಕ್ಕಾಗಿ ವೇಳಾಪಟ್ಟಿ ಮತ್ತು ಶುಲ್ಕದ ಮಾಹಿತಿಯನ್ನು ಪ್ರಕಟಿಸಿದೆ. ವಿದ್ಯಾರ್ಥಿಗಳು ಆದ್ಯತಾ ಕ್ರಮದಲ್ಲಿ ಇಚ್ಛೆಯನ್ನು ದಾಖಲಿಸಬಹುದಾಗಿದೆ. ನೈಜ ಸೀಟು ಹಂಚಿಕೆಯ ಫಲಿತಾಂಶವನ್ನು ಫೆ.2ರಂದು ಪ್ರಕಟಿಸಲಿದೆ.
ಶುಲ್ಕದ ವಿವರ:ಖಾಸಗಿ ಹಾಗೂ ಡೀಮ್ಡ್ ವಿವಿಗಳಲ್ಲಿ ಪದವಿ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸ್‌ಗಳಿಗೆ ಪ್ರವೇಶ ಶುಲ್ಕದ ವಿವರಗಳನ್ನು ಕೆಇಎ ಪ್ರಕಟಿಸಿದೆ. ಈ ಹಿಂದೆ ಖಾಸಗಿ ವೈದ್ಯಕೀಯ ಕಾಲೇಜಿನ ಆಡಳಿತ ಮಂಡಳಿ ಮತ್ತು ಸರ್ಕಾರದ ನಡುವೆ ನಡೆದ ಸಭೆಯ ಪ್ರಕಾರ ವೈದ್ಯ ಹಾಗೂ ದಂತ ವೈದ್ಯಕೀಯ ಪದವಿ ಕೋರ್ಸ್ ಪ್ರವೇಶಕ್ಕೆ ಸರ್ಕಾರಿ ಕೋಟಾದ ಸೀಟುಗಳ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡದಿರಲು ನಿರ್ಧರಿಸಲಾಗಿದೆ. ಇನ್ನುಳಿದ ಕೋಟಾದ ಸೀಟುಗಳಿಗೆ ಶುಲ್ಕ ನಿಗದಿ ಮಾಡಲಾಗಿದೆ.
ಇದನ್ನೂ ಓದಿ:ಪ್ರಧಾನಿಗೇ ನೇರ ತಲುಪಿತು ಧರ್ಮಸ್ಥಳದ ಪ್ರಸಾದ; ಶಾಸಕರು ಮೋದಿಗೆ ನೀಡಿದರು ಸ್ವರ್ಣಖಚಿತ ಸ್ಫಟಿಕ ರುದ್ರಾಕ್ಷಿ ಹಾರ
ಮಂಡ್ಯ ನಾಗಮಂಗಲದ ಎಐಎಂಎಸ್, ಎಸ್‌ಡಿಎಂ ಧಾರವಾಡ, ಕೆಬಿಎನ್ ಕಲಬುರಗಿ, ಸಿಡಿಎಸ್‌ಎನ್‌ಆರ್‌ಐ ಬೆಂಗಳೂರು ಕಾಲೇಜುಗಳಲ್ಲೂ ಸರ್ಕಾರಿ ಕೋಟಾದ ಸೀಟುಗಳಿಗೆ 1,28,746 ರೂ. ಶುಲ್ಕವನ್ನೇ ಮುಂದುವರಿಸಲಾಗಿದೆ. ಇದಲ್ಲದೆ, ಖಾಸಗಿ ಕೋಟಾದ ಸೀಟುಗಳಿಗೆ 18- 20 ಲಕ್ಷ ರೂ., ಎನ್‌ಆರ್‌ಐ ಕೋಟಾ ಸೀಟುಗಳಿಗೆ 32 ಲಕ್ಷ ರೂ. ಗಳಿಂದ 34 ಲಕ್ಷ ರೂ. ಪಾವತಿಸಬೇಕು. ಸಂಪೂರ್ಣ ಶುಲ್ಕದ ಮಾಹಿತಿಗಾಗಿhttp://kea.kar.nic.inನೋಡಬಹುದು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 7 =
Remember me
