ಬೆಂಗಳೂರುಯುಜಿಸಿಇಟಿ-24ರ ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಪಶು ವೈದ್ಯಕೀಯ ಇತ್ಯಾದಿ ಕೋರ್ಸುಗಳ ಪ್ರವೇಶಕ್ಕೆ ಆಪ್ಷನ್ (ಆಯ್ಕೆ) ಗಳನ್ನು ದಾಖಲಿಸಲು ಅವಕಾಶ ನೀಡಿದ್ದು, ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏಳು ದಿನ ಅವಕಾಶ ನೀಡಿದೆ.
ಇಂಜಿನಿಯರಿಂಗ್ ಹಾಗೂ ಇತರೆ ಕೋರ್ಸುಗಳಿಗೆ ಆಪ್ಷನ್ (ಆಯ್ಕೆ) ಗಳನ್ನು ದಾಖಲಿಸಲು ಮಂಗಳವಾರದಿಂದ (ಜು.23) ಪ್ರಕ್ರಿಯೆ ಪ್ರಾರಂಭಿಸಲಾಗಿದೆ. ಜು.29ರವರೆಗೆ ಅಭ್ಯರ್ಥಿಗಳು ತಮ್ಮ ಇಚ್ಛೆಗಳನ್ನು ದಾಖಲಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಪ್ರಕಟಿಸಲಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಪರಿಶೀಲಿಸಿ ಇಚ್ಚೆ / ಆಯ್ಕೆಗಳನ್ನು ದಾಖಲಿಸುವ ಸಮಯದಲ್ಲಿ ಆದ್ಯತಾ ಕ್ರಮಗಳನ್ನು ಅನುಸರಿಸಲು ಸೂಚಿಸಲಾಗಿದೆ. ಆಪ್ಷನ್‌ಗಳನ್ನು ದಾಖಲಿಸುವ ಬಗ್ಗೆ, ಸೀಟು ಹಂಚಿಕೆಯ ವಿವಿಧ ಹಂತಗಳ ಕುರಿತು ವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಯುಜಿಸಿಇಟಿ-24ರ ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬಹುದಾಗಿದೆ.
ವೆರಿಫಿಕೇಶನ್ ಸ್ಲಿಪ್ ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಲಿಂಕ್ ನೀಡಲಾಗಿದ್ದು, ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದು. ಆಯ್ಕೆ/ಇಚ್ಛೆ ಗಳ ದಾಖಲೆಗೆ ಕೆಲವೇ ದಿನಗಳಲ್ಲಿ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು. ಅದರ ನಂತರ ಮೂರು ದಿನ ಆಯ್ಕೆಗಳನ್ನು ಬದಲಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಅದಾದ ಮೂರು ದಿನಗಳ ಬಳಿಕ ನೈಜ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದರು.
ವೈದ್ಯಕೀಯ ಕೋರ್ಸುಗಳು:ರಾಷ್ಟ್ರೀಯ ವೈದ್ಯಕೀಯ ಮಂಡಳಿಯು ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳು / ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುತ್ತದೆ. ಅದರಂತೆ ವೈದ್ಯಕೀಯ ಮತ್ತು ದಂತ ವೈದ್ಯಕ್ಯೀಯ ಕೋರ್ಸುಗಳಿಗೆ ಆಪ್ಷನ್‌ಗಳನ್ನು ಸೇರಿಸುವ ಬಗ್ಗೆ ವಿವರಗಳನ್ನು ಪ್ರಾಧಿಕಾರದ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗುತ್ತದೆ ಎಂದು ವಿವರಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 8 =
Remember me
