ಬೆಂಗಳೂರು:ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಜುಗರಕ್ಕೆ ಒಳಗಾಗುವಂತೆ ಅವರದೇ ಪಕ್ಷದ ಇನ್ನೊಬ್ಬ ನಾಯಕರು ನಡೆದುಕೊಂಡ ಪ್ರಸಂಗವೊಂದು ನಡೆದಿದೆ. ಸಿದ್ದರಾಮಯ್ಯ ಅವರಿಗೆ ಇರಿಸುಮುರಿಸಾಗುವ ರೀತಿಯಲ್ಲಿ ಕಾಂಗ್ರೆಸ್​ ನಾಯಕ ಉಗ್ರಪ್ಪ ಮಾತನಾಡಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಐಕ್ಯತಾ ಸಮಾವೇಶದ ಸಲುವಾಗಿ ರಾಜಧಾನಿ ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಈ ಪ್ರಸಂಗ ನಡೆದಿದೆ. ಪೂರ್ವಭಾವಿ ಸಭೆಗೆ ನೀವು ಕರೆಯದಿದ್ದರೂ ಬಂದಿದ್ದೀರಿ ಎಂದು ಉಗ್ರಪ್ಪ ಬಹಿರಂಗವಾಗಿ ಹೇಳಿದ್ದು ಸಿದ್ದರಾಮಯ್ಯ ಮುಜುಗರಕ್ಕೆ ಒಳಗಾಗುವಂಥ ಪರಿಸ್ಥಿತಿ ಸೃಷ್ಟಿಸಿತ್ತು.
‘ಸಿದ್ದರಾಮಯ್ಯನವರೇ ನಿಮಗೆ ಈ ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ, ಆದರೂ ಯಾಕೆ ಬಂದ್ರಿ?’ ಎಂದು ಉಗ್ರಪ್ಪ ಕೇಳಿದರು. ‘ಏ ಉಗ್ರಪ್ಪ, ನಾನು ಬರೋ ಹಂಗೆ ಇರಲಿಲ್ಲ, ಪರಮೇಶ್ವರ್ ಫೋನ್ ಮಾಡಿ ಕರೆದ್ರು, ಅದಕ್ಕೇ ಬಂದಿದೀನಿ. ನಿಂಗೆ ಈ ಥರ ಮಾತಾಡಿಲ್ಲ ಅಂದ್ರೆ ತಿಂದಿದ್ದು ಅರಗಲ್ವಾ?’ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಂತೆ ಉಗ್ರಪ್ಪ ನಕ್ಕು ಸುಮ್ಮನಾದರು.
ಬ್ರೂಸ್​ ಲೀ ಸತ್ತ 49 ವರ್ಷಗಳ ಬಳಿಕ ಬಯಲಾಯ್ತು ಸಾವಿನ ರಹಸ್ಯ!; ಸಮರಕಲೆ ಪ್ರವೀಣ ಸತ್ತಿದ್ದು ಹೇಗೆ?

ಆಸ್ಟ್ರೇಲಿಯನ್‌ ಸಿನಿಮಾಗೆ ಕನ್ನಡಿಗನ ಸಂಗೀತ; ಮೊದಲ ಪ್ರಯತ್ನದಲ್ಲೇ ಶ್ರೇಷ್ಠ ಸಂಗೀತ ಪ್ರಶಸ್ತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 17 =
Remember me
