ಬೆಂಗಳೂರು:ದೇಶದ ಧರ್ಮ, ಸಂಸ್ಕೃತಿ, ಪರಂಪರೆ ಬಗ್ಗೆ ಅಪಾರ ಗೌರವವನ್ನಿರಿಸಿಕೊಂಡು ತಮ್ಮ ಮಾಧ್ಯಮದ ಮೂಲಕ ನಿರಂತರ ಸೇವೆ ಸಲ್ಲಿಸುತ್ತಿರುವ ಉದ್ಯಮಿ ಡಾ.ವಿಜಯ ಸಂಕೇಶ್ವರ ಅವರು ಸಮಾಜಕ್ಕೆ ಕೊಟ್ಟ ಕೊಡುಗೆ ಅಪಾರವಾಗಿದ್ದು, 75ನೇ ಜನ್ಮದಿನಕ್ಕೆ ಪಾದಾರ್ಪಣೆ ಮಾಡಿರುವ ಸಂಕೇಶ್ವರ ಅವರು ಶತಾಯುಷಿಗಳಾಗಿ, ಆರೋಗ್ಯವಂತರಾಗಿ ಬಾಳುವಂತಾಗಲಿ ಎಂದು ಶ್ರೀಉಜ್ಜಯಿನಿ ಜಗದ್ಗುರು ಶ್ರೀಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು ಶುಭ ಹಾರೈಸಿದರು.ಬೆಂಗಳೂರಿನಲ್ಲಿ ನಡೆದ ಜನಜಾಗೃತಿ ಧರ್ಮ ಸಮಾರಂಭದಲ್ಲಿ ಮಾತನಾಡಿದ ಅವರು, ಪದ್ಮಶ್ರೀ ಡಾ.ವಿಜಯ ಸಂಕೇಶ್ವರ ಅವರು ಕಟ್ಟಿ ಬೆಳೆಸಿರುವ ಉದ್ಯಮದಿಂದ ಸಾವಿರಾರು ಕುಟುಂಬಗಳು ಬದುಕುತ್ತಿದ್ದು, ಡಾ.ವಿಜಯ ಸಂಕೇಶ್ವರ ಅವರು ಮಾಧ್ಯಮವನ್ನು ಲಾಭಕ್ಕಾಗಿ ನಡೆಸದೇ ಸೇವೆಗಾಗಿ ನಡೆಸುತ್ತಿರುವುದರಿಂದ ನಮ್ಮ ನಾಡಿನ ಎಲ್ಲ ಮಠ ಮಂದಿರಗಳ ಬಗ್ಗೆ ನಿರಂತರವಾಗಿ ಸುದ್ದಿ ಪ್ರಕಟವಾಗುತ್ತಿವೆ. ಅವರು ಹಾಕಿಕೊಟ್ಟ ಮೇಲ್ಪಂಕ್ತಿಯಲ್ಲಿ ಅವರ ಸುಪುತ್ರರಾದ ಡಾ.ಆನಂದ ಸಂಕೇಶ್ವರ ಕೂಡಾ ಮುನ್ನೆಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಮಟ್ಟಕ್ಕೆ ವಿ.ಆರ್.ಎಲ್ ಸಂಸ್ಥೆ ಬೆಳೆಯಲಿ ಎಂದು ಜಗದ್ಗುರುಗಳು ಇದೇ ವೇಳೆ ಶುಭ ಹಾರೈಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − ten =
Remember me
