ಹಾವೇರಿ:ಮದುವೆಯಾಗಲು ಹುಡುಗಿ ಸಿಗದೆ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕಿನ ಮಾಸಣಗಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಂಜುನಾಥ ನಾಗನೂರು(36) ಎಂದು ಗುರುತಿಸಲಾಗಿದ್ದು, ಕಳೆದ 8 ವರ್ಷಗಳಿಂದ ಮದುವೆಯಾಗಲು ಹೆಣ್ಣು ಹುಡುಕುತ್ತಿದ್ದರು. ಆದರೆ, ಯಾರು ಇವರಿಗೆ ಹೆಣ್ಣು ಕೊಡಲು ಮುಂದೆ ಬಂದಿರಲಿಲ್ಲ.
ಇದನ್ನೂ ಓಧಿ:ಬಿಬಿಎಂಪಿ ವಾರ್ಡ್​ ಪುನರ್​ವಿಂಗಡಣೆ; ಸಮಿತಿ ರಚಿಸಿ ಸರ್ಕಾರ ಆದೇಶ
ಮದುವೆಯಾಗಲು ಹೆಣ್ಣು ಸಿಗದೆ ತೀವ್ರವಾಗಿ ಮನನೊಂದಿದ್ದ ಮಂಜುನಾಥ್​ ನನ್ನಿಂದ ತಂದೆ-ತಾಯಿಗೆ ತುಂಬಾ ತೊಂದರೆಯಾಗುತ್ತಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್​ ನೋಟ್​ ಬರೆದಿಟ್ಟು ತಮ್ಮ ಜಮೀನಿನಲ್ಲಿ ವಿಷ ಕುಡಿದು ಪ್ರಾಣ ಬಿಟ್ಟಿದ್ಧಾರೆ.
ಸ್ಥಳಕ್ಕೆ ಭೇಟಿ ನೀಡಿದ ಬ್ಯಾಡಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
