ಬೆಂಗಳೂರು:ನೋಂದಣಿಯಾಗದ ಶಾಲೆಗಳು, ಅನುಮತಿ ಪಡೆಯದೆ ಹೆಚ್ಚುವರಿ ತರಗತಿಗಳ ಆರಂಭ ಸೇರಿ ರಾಜ್ಯಾದ್ಯಂತ 1,695 ಅನಧಿಕೃತ ಶಾಲೆಗಳಿದ್ದು, ತಕ್ಷಣವೇ ಕ್ರಮ ಕೈಗೊಳ್ಳುವ ಬದಲಾಗಿ ಮಕ್ಕಳ ಹಿತದೃಷ್ಟಿಯಿಂದ ಹಂತ ಹಂತವಾಗಿ ಕ್ರಮ ಜರುಗಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಸಮಗ್ರ ಶಿಕ್ಷಣ ಅಭಿಯಾನ ಕಚೇರಿಯಲ್ಲಿ ಶುಕ್ರವಾರ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು.
ಆಯಾ ಸಮಸ್ಯೆಗಳನ್ನು ಒಂದೊಂದಾಗಿ ಪರಿಗಣಿಸಿ ಶಾಲೆಗಳ ಮೇಲೆ ಕ್ರಮ ಜರುಗಿಸಲಾಗುತ್ತದೆ. ಆ.14ರೊಳಗೆ ಅನಧಿಕೃತ ಶಾಲೆಗಳನ್ನು ಮುಚ್ಚಿಸುವಂತೆ ಆದೇಶ ಹೊರಡಿಸಲಾಗಿದೆ. ಶಾಲೆಗಳನ್ನು ಮುಚ್ಚಿಸುವುದು ದೊಡ್ಡ ವಿಷಯವಲ್ಲ, ಆ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳ ಹಿತ ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
1,695 ಶಾಲೆಗಳು ಯಾವುವು?ರಾಜ್ಯಾದ್ಯಂತ 26 ಶಾಲೆಗಳು ನೋಂದಣಿಯನ್ನೇ ಮಾಡಿಲ್ಲ, ಅನುಮತಿ ಪಡೆಯದೆ ಉನ್ನತೀಕರಿಸಿರುವ ಶಾಲೆಗಳು 76, ಇತರೆ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳು 143, ಅನುಮತಿ ಪಡೆಯದೆ ಹೆಚ್ಚುವರಿ ವಿಭಾಗಗಳನ್ನು ಪಡೆದಿರುವ 631, ಅನುಮತಿ ಪಡೆಯದೆ ಸ್ಥಳಾಂತರಿಸಿರುವ 190, ಅನುಮತಿ ಪಡೆಯದೆ ಹಸ್ತಾಂತರ ಮಾಡಿರುವ 15, ಒಂದೇ ಕಟ್ಟಡದಲ್ಲಿ ಕೇಂದ್ರ ಮತ್ತು ರಾಜ್ಯ ಪಠ್ಯಕ್ರಮ ಬೋಧಿಸುತ್ತಿರುವ ಶಾಲೆಗಳು-495 ಸೇರಿ 1,695 ಶಾಲೆಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಅನುಮತಿ ತಿರಸ್ಕರಿಸುವ ಶಾಲೆಗಳಿಗೂ ಮತ್ತೊಮ್ಮೆ ಅವಕಾಶ ಮಾಡಿಕೊಡಲಾಗಿದೆ. ಆದರೆ, ಹೊಸದಾಗಿ ಅನಧಿಕೃತ ಶಾಲೆಗಳು ಕಂಡುಬಂದಲ್ಲಿ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಈ ಸಂಬಂಧ ಮತ್ತೊಮ್ಮೆ ಸುತ್ತೋಲೆ ಹೊರಡಿಸಿ ಕಟ್ಟುನಿಟ್ಟಿನ ಕ್ರಮ ಜರುಗಿಸಲು ಮುಂದಾಗುವಂತೆ ಸೂಚಿಸುವುದಾಗಿ ತಿಳಿಸಿದರು.ಈ ವೇಳೆ ಶಾಲಾ ಶಿಕ್ಷಣ ಆಯುಕ್ತೆ ಬಿ.ಬಿ. ಕಾವೇರಿ ಉಪಸ್ಥಿತರಿದ್ದರು.
18 ರಂದು ಮೊಟ್ಟೆ ವಿತರಣೆ ಯೋಜನೆ ಉದ್ಘಾಟನೆರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿ ಮಕ್ಕಳಿಗೆ ವಾರದಲ್ಲಿ 2 ದಿನ ನೀಡುತ್ತಿರುವ ಮೊಟ್ಟೆ ವಿತರಣೆ ಯೋಜನೆಯನ್ನು ಆ.18ರಂದು ಅಧಿಕೃತವಾಗಿ ಶಾಲೆಯೊಂದರಲ್ಲಿ ಮೊಟ್ಟೆ/ಬಾಳೇಹಣ್ಣು/ಶೇಂಗಾ ಚಿಕ್ಕಿ ವಿತರಿಸುವ ಮೂಲಕ ಚಾಲನೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಶಾಲಾ ವಿದ್ಯುತ್, ನೀರು ಬಿಲ್ ಮನ್ನಾ ಚಿಂತನೆ:ಸರ್ಕಾರಿ ಶಾಲೆಗಳ ನೀರು ಮತ್ತು ವಿದ್ಯುತ್ ಬಿಲ್ ಮೊತ್ತವನ್ನು ಮನ್ನಾ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ. ಸರ್ಕಾರಿ ಶಾಲೆಗಳನ್ನು ಅತಿ ಕಡಿಮೆ ಮೊತ್ತದ ಬಿಲ್ ಗಳಿರುವುದರಿಂದ ಸರ್ಕಾರಕ್ಕೆ ಮನವಿ ಮಾಡಿ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಸ್ಯ ಶ್ಯಾಮಲಾ ಯೋಜನೆ 50 ಲಕ್ಷ ಗಿಡಬಜೆಟ್‌ನಲ್ಲಿ ೋಷಿಸಿದ್ದಂತೆ ಶಾಲಾ ಆವರಣ ಮತ್ತು ಸುತ್ತಲಿನ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಹಯೋಗದಲ್ಲಿ 50 ಲಕ್ಷ ಗಿಡಗಳನ್ನು ನೆಡುವ ‘ಸಸ್ಯ ಶ್ಯಾಮಲಾ’ ಯೋಜನೆ ಅನುಷ್ಠಾನಕ್ಕೆ ಚರ್ಚಿಸಲಾಗುತ್ತಿದೆ. ಸದ್ಯದಲ್ಲಿಯೇ ಎಂದು ಮಾಹಿತಿ ನೀಡಿದರು.
ಅಗ್ನಿಶಾಮಕ ಮತ್ತು ಕಟ್ಟಡ ಸುರಕ್ಷತೆ ನಿಯಮಗಳಲ್ಲಿ ಯಾವುದೇ ಕಾರಣಕ್ಕೂ ರಾಜಿಮಾಡಿಕೊಳ್ಳುವುದಿಲ್ಲ. ಸರ್ಕಾರ ನಿಗದಿ ಮಾಡಿರುವ ನಿಯಮಗಳನ್ನು ಪಾಲನೆ ಮಾಡಲೇಬೇಕು.– ಮಧು ಬಂಗಾರಪ್ಪ, ಶಿಕ್ಷಣ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 6 =
Remember me
