| ರುದ್ರಣ್ಣ ಹರ್ತಿಕೋಟೆ, ಬೆಂಗಳೂರು
ಕಾಂಗ್ರೆಸ್ ಪಕ್ಷ ಚುನಾವಣೆಯಲ್ಲಿ ಘೋಷಣೆ ಮಾಡಿದ್ದ ಐದು ಭರವಸೆಗಳ ಜಾರಿಗೆ ಸಿದ್ಧತೆ ಬಹುತೇಕ ಪೂರ್ಣಗೊಂಡಿದ್ದು, ಹೆಚ್ಚಿನ ಷರತ್ತುಗಳಿಲ್ಲದೇ ಅನುಷ್ಠಾನಕ್ಕೆ ತರುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ಹಣಕಾಸು ಹಾಗೂ ಇತರೆ ಸಂಬಂಧಿಸಿದ ಇಲಾಖೆಗಳ ಜತೆ ಸತತವಾಗಿ ನಡೆಸಿರುವ ಸಭೆಗಳಲ್ಲಿ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಬೇಕಾಗಿರುವ ಹಣಕಾಸಿನ ಹೊಂದಾಣಿಕೆಯನ್ನು ಬಹುತೇಕ ಪೂರ್ಣಗೊಳಿಸಲಾಗಿದೆ.
ಬುಧವಾರ ಸಚಿವರು ಹಾಗೂ ಅಧಿಕಾರಿಗಳ ಜತೆ ಸಿದ್ದರಾಮಯ್ಯ ಸಭೆ ನಡೆಸುವರು, ಆ ಸಭೆಯಲ್ಲಿ ಸರ್ಕಾರ ಯಾವ ರೀತಿ ಗ್ಯಾರಂಟಿಗಳನ್ನು ಜಾರಿಗೊಳಿಸಲಿದೆ ಎಂಬುದನ್ನು ವಿವರಿಸುವರು. ಅಧಿಕಾರಿಗಳಿಗೆ ಕೆಲವು ಜವಾಬ್ದಾರಿಗಳನ್ನು ನಿಗದಿ ಮಾಡುವರು. ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿಗಳಿಗೆ ಒಪ್ಪಿಗೆ ನೀಡುವ ಮೂಲಕ ಅನುಷ್ಠಾನ ಮಾಡಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ಖಚಿತಪಡಿಸಿವೆ.
ಷರತ್ತುಗಳೇನು?:ಐದು ಭರವಸೆಗಳ ಜಾರಿಗೆ ಹೆಚ್ಚಿನ ಷರತ್ತುಗಳು ಇರುವುದಿಲ್ಲ. ಸಣ್ಣಪುಟ್ಟ ನಿಬಂಧನೆಗಳನ್ನು ಮಾತ್ರ ಹಾಕಲಾಗುತ್ತದೆ ಎಂದು ಮೂಲಗಳು ಖಚಿತಪಡಿಸಿವೆ. ಸಾರಿಗೆ ಬಸ್​ಗಳಲ್ಲಿ ನಿತ್ಯ ಸಂಚರಿಸುವವರ ಪೈಕಿ ಶೇ.50 ರಷ್ಟು ಮಹಿಳೆಯರಿರುತ್ತಾರೆ ಎಂದು ಸಾರಿಗೆ ನಿಗಮಗಳು ಮಾಹಿತಿ ನೀಡಿದ್ದವು. ಆದರೆ, ಮರುಪರಿಶೀಲನೆ ಮಾಡಿದಾಗ ಅಂದಾಜು 50 ಸಾವಿರ ಮಹಿಳೆಯರು ದಿನಂಪ್ರತಿ ಸಂಚರಿಸಬಹುದೆಂದು ಹೇಳಲಾಗುತ್ತಿದೆ. ಉಚಿತ ವಿದ್ಯುತ್ ವಿಚಾರದಲ್ಲಿಯೂ ಹೆಚ್ಚಿನ ಗೊಂದಲಗಳಿಗೆ ಅವಕಾಶವಿಲ್ಲವೆಂದು ಹೇಳಲಾಗುತ್ತಿದೆ.
ಯೋಜನೆಗಳ ಜಾರಿಗೆ ಸಂಪನ್ಮೂಲ ಕ್ರೋಡೀಕರಣ ಎಲ್ಲಿಂದ ಎಂಬುದು ಅಂತಿಮವಾಗಿದೆ. ಇಂಧನ ಇಲಾಖೆಯಲ್ಲಿಯೇ ಅಂದಾಜು 5 ಸಾವಿರ ಕೋಟಿ ರೂ.ಗಳು ಲಭ್ಯವಾಗುವ ರೀತಿಯಲ್ಲಿ ಯೋಜನೆ ರೂಪಿಸಲಾಗಿದೆ. ಹಿಂದಿನ ಸರ್ಕಾರದಲ್ಲಿ ಬಳಕೆಯಾಗದೆ ಉಳಿದಿರುವ 10 ಸಾವಿರ ಕೋಟಿ ರೂ.ಗಳಷ್ಟು ಹಣ ಲಭ್ಯವಿದೆ. ಬಜೆಟ್​ನಲ್ಲಿ ಹೇಳಿರುವುದರಲ್ಲಿಯೇ ಸುಮಾರು 9 ಸಾವಿರ ಕೋಟಿ ರೂ.ಗಳ ಸಾಲ ಮಾಡಲು ಅವಕಾಶ ಇದೆ. ಈ ಯೋಜನೆಗಳ ಲಾಭ ಪರಿಶಿಷ್ಟರಿಗೆ ನೀಡಲು ಎಸ್​ಸಿಪಿ-ಟಿಎಸ್​ಪಿಯಲ್ಲಿ 10 ಸಾವಿರ ಕೋಟಿ ರೂ.ಗಳನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ. ಈ ರೀತಿಯಲ್ಲಿ 35 ಸಾವಿರ ಕೋಟಿ ರೂ.ಗಳ ತನಕ ಸುಲಭವಾಗಿ ಹೊಂದಾಣಿಕೆಯಾಗುತ್ತದೆ. ಉಳಿದ ಮೊತ್ತವನ್ನು ಬೇರೆಬೇರೆ ಮೂಲಗಳಿಂದ ಕ್ರೋಡೀಕರಿಸಬಹುದು. ಅದಕ್ಕೆ ಸಾಕಷ್ಟು ಸಮಯ ಇರುತ್ತದೆ ಎಂದು ಮೂಲಗಳು ಹೇಳುತ್ತವೆ.
ಸೋರಿಕೆ ತಡೆ:ದೆಹಲಿ, ತಮಿಳುನಾಡುಗಳಲ್ಲಿ ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ, ಆ ರಾಜ್ಯಗಳ ಆರ್ಥಿಕ ಪರಿಸ್ಥಿತಿಯೇನು ಹದಗೆಟ್ಟಿಲ್ಲ. ಆದ್ದರಿಂದ ರಾಜ್ಯದಲ್ಲಿಯೂ ತೆರಿಗೆ ಹೆಚ್ಚಳದ ಯಾವುದೇ ಪ್ರಸ್ತಾಪ ಇಲ್ಲದಂತೆ ಜಾರಿಗೆ ತರಲಾಗುತ್ತದೆ ಎಂದು ಸರ್ಕಾರದ ಮೂಲಗಳು ಹೇಳುತ್ತವೆ. ತೆರಿಗೆ ಸಂಗ್ರಹಣೆಯಲ್ಲಿ ಸೋರಿಕೆ ತಪ್ಪಿಸಿದರೆ ಹೆಚ್ಚುವರಿಯಾಗಿ 15 ರಿಂದ 20 ಸಾವಿರ ಕೋಟಿ ರೂ.ಗಳ ತನಕ ಸಂಗ್ರಹಣೆಗೆ ಅವಕಾಶ ಇದೆ. ಆ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ಮಾಡುವಂತೆ ಸಿದ್ದರಾಮಯ್ಯ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬೃಹತ್ ಸಮಾವೇಶ:ಸಚಿವ ಸಂಪುಟದಲ್ಲಿ ಭರವಸೆಗಳಿಗೆ ಒಪ್ಪಿಗೆ ನೀಡುವ ಮೂಲಕ ಜಾರಿಗೆ ಕೊಡಲಾಗುತ್ತದೆ. ಆದರೆ, ದೊಡ್ಡ ಸಮಾವೇಶವೊಂದರ ಮೂಲಕ ಇಡೀ ದೇಶಕ್ಕೆ ಗ್ಯಾರಂಟಿಗಳ ಬಗ್ಗೆ ಸಂದೇಶವೊಂದನ್ನು ರವಾನಿಸಲು ಕಾಂಗ್ರೆಸ್ ಪಕ್ಷದಲ್ಲಿ ಚರ್ಚೆ ನಡೆದಿದೆ. ಮುಂದೆ ಚುನಾವಣೆ ನಡೆಯುವ ಬೇರೆ ಬೇರೆ ರಾಜ್ಯಗಳಲ್ಲೂ ಕಾಂಗ್ರೆಸ್ ಈ ಭರವಸೆಗಳನ್ನು ನೀಡಿರುವುದರಿಂದ ಅಲ್ಲಿನ ಜನರಲ್ಲಿ ಪಕ್ಷದ ಬಗ್ಗೆ ಉತ್ತಮ ಅಭಿಪ್ರಾಯ ಮೂಡಿಸುವುದರ ಜತೆಗೆ ಲೋಕಸಭಾ ಚುನಾವಣೆಗೂ ಸಜ್ಜಾಗುವುದು ಸಮಾವೇಶದ ಹಿಂದಿನ ಉದ್ದೇಶವಾಗಿದೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ವಿವಿಧ ಮುಖ್ಯಮಂತ್ರಿಗಳನ್ನು ಆಹ್ವಾನಿಸಿ ನುಡಿದಂತೆ ನಡೆದಿದ್ದೇವೆ ಎಂಬ ಸಂದೇಶ ನೀಡಲಾಗುತ್ತದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.
ಕಾಂಗ್ರೆಸ್​​ನವರಿಂದ ಪ್ರಧಾನಿ ಮೋದಿಗೆ 15 ರೂ. ಮನಿಯಾರ್ಡರ್​!; ಯಾಕೆ, ಏನು? ಇಲ್ಲಿದೆ ಮಾಹಿತಿ..

ಬಸ್ ಚಲಾಯಿಸುತ್ತಿರುವಾಗಲೇ ಹೃದಯಾಘಾತಕ್ಕೀಡಾಗಿ ಚಾಲಕ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − eleven =
Remember me
