ತುಮಕೂರು:ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್​ ಬಿಮಾ ಯೋಜನೆಯಡಿ ಪ್ರಸಕ್ತ ಸಾಲು ಮತ್ತು ಹಂಗಾಮಿನ ಬೆಳೆಗೆ ವಿಮಾ ನಷ್ಟ ಪರಿಹಾರದ ನೋಂದಣಿಗೆ ಅವಕಾಶವಿದೆ.
2022ರ ಹಿಂಗಾರಿಗೆ ಮುಸುಕಿನ ಜೋಳ(ನೀರಾವರಿ) ಬೆಳೆಗೆ ಡಿಸೆಂಬರ್​ 16 ಮತ್ತು ಕಡಲೆ(ಮಳೆ ಆಶ್ರಿತ) ಬೆಳೆಯಡಿ ನ.30ರೊಳಗಾಗಿ ನೋಂದಾಯಿಸಿಕೊಳ್ಳಲು ಜಂಟಿ ಕೃಷಿ ನಿರ್ದೇಶಕರು ಕೋರಿದ್ದಾರೆ.
2022-23ರ ಹಿಂಗಾರು ಮತ್ತು ಬೇಸಿಗೆ ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಸಂಭವಿಸುವ ಹವಾಮಾನ ವೈಪರಿತ್ಯಗಳಾದ ಹೆಚ್ಚಿನ ಮಳೆ ನೆರೆ, ಪ್ರವಾಹಗಳಿಂದ ಬೆಳೆ ಮುಳುಗಡೆ, ದೀರ್ಘಕಾಲದ ತೇವಾಂಶ ಕೊರತೆ ತೀವ್ರ ಬರಗಾಲ ಮುಂತಾದವುಗಳಿಂದ ಯಾವುದೇ ಅಧಿಸೂಚಿತ ವಿಮಾ ಘಟಕದಲ್ಲಿ ಬಿತ್ತನೆಯಾದ ನಂತರ ಕಟಾವಿಗೆ ಮೊದಲು ನಿರೀತ ಇಳುವರಿಯ ಪ್ರಾರಂಭಿಕ ಇಳುವರಿಯೂ ಶೇ.50ಕ್ಕಿಂತ ಕಡಿಮೆ ಇದ್ದರೆ, ವಿಮೆ ಮಾಡಿಸಿದ ರೈತರಿಗೆ ಅಂದಾಜು ಮಾಡಲಾದ ಬೆಳೆ ವಿಮಾ ನಷ್ಠ ಪರಿಹಾರದಲ್ಲಿ ಶೇ.25 ಹಣ ನೀಡಲಾಗುವುದು.
ಈ ಯೋಜನೆಯಡಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರದೊಳಗೆ (14 ದಿನ) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಆಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ವೈಯಕ್ತಿಕವಾಗಿ ವಿಮಾ ಸಂಸ್ಥೆಯು ನಷ್ಠ ನಿರ್ಧಾರ ಮಾಡಿ ಬೆಳೆನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ರಾಜ್ಯದ ಎಲ್ಲ ಬೆಳೆಗಳನ್ನು ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಉಡುಪಿಯಲ್ಲಿ ದುರಂತ: ಮದ್ವೆ ಮುನ್ನಾ ದಿನದ ರೋಸ್ ಕಾರ್ಯಕ್ರಮದಲ್ಲಿ ಕುಸಿದು ಬಿದ್ದ ಯುವತಿ ಸಾವು!

ರಾಮನಗರದಿಂದ ಶಬರಿಮಲೆಗೆ ಹೋಗಿದ್ದವರ ಮಿನಿ ಬಸ್​ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 4 =
Remember me
