ಬೆಂಗಳೂರು:ಇಂದು ಸಂಪುಟ ಸಭೆ ಬಳಿಕ ಮಹತ್ವದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಘೋಷಿಸಿದ್ದಾರೆ. ವೃದ್ಧಾಪ್ಯವೇತನ, ವಿಧವಾವೇತನ, ಅಂಗವಿಕಲರ ಮಾಸಾಶನ ಪಡೆಯುವ ಮಹಿಳೆಯರಿಗೂ 2000 ರೂ. ಸಿಗುತ್ತಾ ಎನ್ನುವ ಪ್ರಶ್ನೆ ಮುನ್ನೆಲೆಗೆ ಬಂದಿದೆ.
ಇದನ್ನೂ ಓದಿ:ಇದೇ ವರ್ಷ 5 ಗ್ಯಾರಂಟಿಗಳನ್ನು ಜಾರಿಗೆ ತರುತ್ತೇವೆ: ಸಿಎಂ ಸಿದ್ದರಾಮಯ್ಯ
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ,“ನಾವು ಹೇಳಿರುವುದು ಮನೆ ಯಜಮಾನಿ ಖಾತೆಗೆ 2000 ರೂ. ಜಮೆ ಮಾಡುತ್ತೇವೆ. ಅವರ ಅಕೌಂಟ್​ಗೆ ತಿಂಗಳಿಗೆ 2 ಸಾವಿರ ರೂ. ಜಮಾ ಮಾಡುತ್ತೇವೆ ಎಂದಿದ್ದೇವೆ. ಆದರೆ ಇದಕ್ಕಾಗಿ ಅಕೌಂಟ್​ ನಂಬರ್, ಆಧಾರ್​ ನಂಬರ್​, ಅರ್ಜಿ ಮುಂತಾದವನ್ನು ನೀಡಬೇಕು. ನಂತರ ಇಲಾಖೆಯವರು ಈ ಮಾಹಿತಿಯನ್ನು ಪ್ರಾಸೆಸ್ ಮಾಡಿ ಆಗಸ್ಟ್​ 15ನೇ ತಾರೀಕಿನಿಂದ ಈ ಯೋಜನೆಯನ್ನು ಜಾರಿಗೆ ತರುತ್ತಾರೆ. ಈಗಾಗಲೇ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯತ್ತಿರುವವರಿಗೂ ಈ ಭತ್ಯೆ ಸಿಗಲಿದೆ. ಈ ಯೋಜನೆ ಎಲ್ಲಾ ಬಿಪಿಎಲ್ ಹಾಗೂ ಎಪಿಎಲ್ ಮಹಿಳೆಯರಿಗೆ ಈ ಲಾಭ ಸಿಗಲಿದೆ” ಎಂದು ಸುದ್ದಿಗೋಷ್ಟಿಯಲ್ಲಿ ಹೇಳಿದರು.
ಇದನ್ನೂ ಓದಿ:ಗ್ಯಾರಂಟಿಗಳನ್ನು ಜಾರಿಗೊಳಿಸಲು ಕಾಂಗ್ರೆಸ್‌ ಪಕ್ಷ ಬದ್ಧವಾಗಿದೆ, ಯಾವುದೇ ಗಾಳಿಸುದ್ದಿಗಳಿಗೆ ಕಿವಿಕೊಡಬೇಡಿ: ಡಿ.ಕೆ ಶಿವಕುಮಾರ್
ಈ ಸಂದರ್ಭದಲ್ಲಿ ಅತ್ತೆಗೆ 2000 ರೂ. ಸಿಗುತ್ತದೋ, ಸೊಸೆಗೆ ಸಿಗುತ್ತದೋ ಎಂಬ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ, ಕುಟುಂಬದವರು ನೀಡಿದ ಮಾಹಿತಿಯ ಆಧಾರದ ಮೇಲೆ ಮನೆ ಒಡತಿಯ ಖಾತೆಗೆ ಹಣವನ್ನು ಜಮೆ ಮಾಡಲಾಗುತ್ತದೆ ಎಂದಿದ್ದರು. ಇದೇ ಸಂದರ್ಭದಲ್ಲಿ ಈಗಾಗಲೇ ಸಾಮಾಜಿಕ ಭದ್ರತಾ ಯೋಜನೆಯಡಿ ಅಂದರೆ, ವೃದ್ಧಾಪ್ಯವೇತನ, ವಿಧವಾವೇತನ, ಅಂಗವಿಕಲರ ಮಾಸಾಶನ ಪಿಂಚಣಿ ಪಡೆಯತ್ತಿರುವವರಿಗೂ ಈ ಭತ್ಯೆ ಸಿಗಲಿದೆ ಎಂದು ಮಾತನಾಡುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
