ಬೆಂಗಳೂರು: ಕೃಷಿಗೆ ಸಂಬಂಧಿತ ಮಾಹಿತಿ, ಸಲಹೆ, ಮಾರ್ಗದರ್ಶನ ಪಡೆಯಲು ಏಕೀಕೃತ ರೈತ ಕರೆ ಕೇಂದ್ರ ಹೆಚ್ಚು ಪರಿಣಾಮಕಾರಿಯಾಗಲಿದೆ ಎಂದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ಕೃಷಿ ಆಯುಕ್ತಾಲಯದಲ್ಲಿ ರೈತ ಕರೆ ಕೇಂದ್ರ ಹಾಗೂ 2023-24 ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯಕ್ರಮದಡಿ ತಾಲ್ಲೂಕು ಮಟ್ಟದ ಮಾಸ್ಟರ್ ತರಬೇತುದಾರರಿಗೆ ಏರ್ಪಡಿಸಿದ್ದ ರಾಜ್ಯಮಟ್ಟದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಬೆಳೆ, ಹವಾಮಾನ, ವಿಮೆ,ರೈತ ವಿದ್ಯಾನಿಧಿ, ಕೃಷಿ ಸಂಜೀವಿನಿ, ಪಿ.ಎಂ ಕಿಸಾನ್, ಕೆ.ಕಿಸಾನ್, ಬೆಳೆ ಸಮೀಕ್ಷೆ ಮತ್ತಿತರ ವಿಷಯಗಳಲ್ಲಿ ಉಪಯುಕ್ತ ಮಾಹಿತಿ, ಸಲಹೆ ಹಾಗೂ ಮಾರ್ಗದರ್ಶನಗಳನ್ನು ಸುಲಭವಾ ಒದಗಿಸುವುದು ಏಕೀಕೃತ ರೈತ ಕರೆ ಕೇಂದ್ರದ ಉದ್ದೇಶ ಎಂದರು.
ಈ ಹಿಂದೆ ವಿವಿಧ ಯೋಜನೆಗಳಿಗೆ ಇದ್ದ 8 ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಏಕೀಕೃತ ಕರೆ ಕೇಂದ್ರ ಸ್ಥಾಪಿಸಲಾಗಿದೆ 1800-425-3553 ನೂತನ ಏಕೀಕೃತ ಸಹಾಯವಾಣಿ ಕರೆ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಹೇಳಿದರು.
ರೈತರ ಕರೆ ಸ್ವೀಕರಿಸಿದ ಸಚಿವ!ಕೃಷಿ ಆಯುಕ್ತಾಲಯದಲ್ಲಿ ಏಕೀಕೃತ ರೈತ ಕರೆ ಕೇಂದ್ರಕ್ಕೆ ಚಾಲನೆ ನೀಡಿದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೆಲ ಹೊತ್ತು ಸ್ವತಃ ರೈತರ ಕರೆಗಳನ್ನು ಸ್ವೀಕರಿಸಿ ಸಮಾದಾನದಿಂದ ಸಮಸ್ಯೆ ಆಲಿಸಿದರು. ಅವರ ವಿವರಗಳನ್ನು ದಾಖಲಿಸಿಕೊಂಡ ಸಚಿವರು ಬರ ಪರಿಸ್ಥಿತಿ ವಾತಾವರಣ ಮುಂದುವರೆದರೆ ನಂತರ ಬೆಳೆ ವಿಮೆ ಬಗ್ಗೆ ನಿರ್ಧಾರ ಕೈಗೊಳ್ಳುಲಾಗುವುದು ಎಂದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
