ಬೆಂಗಳೂರು: ವಿವಿಧ ವಿಶ್ವವಿದ್ಯಾಲಯಗಳ ಕಾರ್ಯಚಟುವಟಿಕೆಗಳು ಭಿನ್ನ ಅವಧಿಗೆ ನಡೆಯುವುದರಿಂದ ಅಭ್ಯರ್ಥಿಗಳಿಗೆ ಅನಾನುಕೂಲವಾಗುತ್ತಿದ್ದು, ಏಕರೂಪದ ಕ್ಯಾಲೆಂಡರ್ ಆಫ್ ಇವೆಂಟ್ಸ್ ಜಾರಿಗೊಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳ ಸೂಚನೆಗೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಪರಿಷತ್ತು ಕಾರ್ಯನಿರತವಾಗಿದೆ ಎಂದು ಮಾಹಿತಿ ನೀಡಿದರು.
ಜೆ.ಎನ್.ಯು.ನಲ್ಲಿ ಕನ್ನಡ ಅಧ್ಯಯನ ಪೀಠವನ್ನು ತಮ್ಮ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಲಾಗಿತ್ತು. ಅದರ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಪಡೆದು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಶಿಕ್ಷಣದ ಗುಣಮಟ್ಟ ಕಾಯ್ದುಕೊಳ್ಳಲು ಬೋಧಕ ಸಿಬ್ಬಂದಿ ನೇಮಕ ಅತಿ ಅಗತ್ಯ. ಈ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳ ಪೈಕಿ ಕಲ್ಯಾಣ ಕರ್ನಾಟಕ ಮತ್ತು ಬ್ಯಾಕ್‌ಲಾಗ್ ಹುದ್ದೆಗಳನ್ನು ಮೊದಲಿಗೆ ಭರ್ತಿ ಮಾಡುವಂತೆ ಹಾಗೂ ಉಳಿದ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಕುರಿತು ಆದ್ಯತೆಗಳನ್ನು ಗುರುತಿಸಿ ಕ್ರಮ ವಹಿಸುವಂತೆ ಹಣಕಾಸು ಹಾಗೂ ಉನ್ನತ ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡಿದರು.
:ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎಲ್.ಎಂ.ಎಸ್. ವ್ಯವಸ್ಥೆ ಜಾರಿಗೆ ಬಂದಿರುವುದರಿಂದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್, ಲ್ಯಾಪ್‌ಟಾಪ್ ವಿತರಿಸುವ ಬಗ್ಗೆ, ಪಿ.ಎಚ್.ಡಿ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮೈಸೂರು ಮಹಾರಾಣಿ ಆರ್ಟ್ಸ್ ಕಾಲೇಜು ಹಾಸ್ಟೆಲ್ ಆವರಣದಲ್ಲಿ 99 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಆರ್ಟ್ಸ್ ಮತ್ತು ವಿಜ್ಞಾನ ಕಾಲೇಜಿನ ತಲಾ ಸಾವಿರ ವಿದ್ಯಾರ್ಥಿನಿಯರಿಗೆ ಅವಕಾಶ ಕಲ್ಪಿಸುವ ಹಾಸ್ಟೆಲ್ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಲು ಹೇಳಿದರು.
ಉನ್ನತ ಶಿಕ್ಷಣ ಇಲಾಖೆ ಬಳಿ ಈಗಾಗಲೇ 47 ಕೋಟಿ ರೂ. ಲಭ್ಯವಿದ್ದು ಮುಂದಿನ ವರ್ಷದ ಆಯವ್ಯಯದಲ್ಲಿ ಹೆಚ್ಚುವರಿ ಅನುದಾನ ಒದಗಿಸುವಂತೆ ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.ಶಿಥಿಲಾವಸ್ಥೆಯಲ್ಲಿರುವ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜಿನ ನವೀಕರಣ/ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರಲ್ಲದೆ, ದಸರಾ ಸಂದರ್ಭದಲ್ಲಿ ತಾವು ಸ್ವತಃ ಮಹಾರಾಣಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸುವುದಾಗಿ ಹೇಳಿದರು.
ಬಹುತೇಕ ಮಕ್ಕಳು ಬಡ ಹಾಗೂ ಕೆಳ ಮಧ್ಯಮ ವರ್ಗದ ಕುಟುಂಬಗಳಿಗೆ ಸೇರಿದ್ದಾರೆ. ಇವರ ಅನುಕೂಲಕ್ಕಾಗಿ ಸುಸಜ್ಜಿತ ಹಾಸ್ಟೆಲ್ ನಿರ್ಮಿಸುವ ಅಗತ್ಯವಿದೆ. ಈ ಹಾಸ್ಟೆಲ್ ನಿರ್ಮಾಣಕ್ಕೆ ತಮ್ಮ ಹಿಂದಿನ ಅವಧಿಯಲ್ಲಿ ಆಯವ್ಯಯದಲ್ಲಿ ಅನುದಾನ ಘೋಷಿಸಿದ್ದನ್ನು ನೆನಪಿಸಿದರು.ರಾಜ್ಯದ 16 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳ ಸುಧಾರಣೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.ವಿಶ್ವವಿದ್ಯಾಲಯಗಳು ವಿಭಜನೆಯಾಗಿರುವುದರಿಂದ ಹಳೆಯ 5 ವಿಶ್ವವಿದ್ಯಾಲಯಗಳ ಪಿಂಚಣಿ ವಿತರಣೆ ಸಮಸ್ಯೆ ಕುರಿತು ಚರ್ಚಿಸಲಾಯಿತು. ಜತೆಗೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹಣಕಾಸು ಶಿಸ್ತು, ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತಿತರ ವಿಷಯಗಳಲ್ಲಿ ಸುಧಾರಣೆ ತರುವ ಕುರಿತು ಕ್ರಮ ಕೈಗೊಳ್ಳುವಂತೆ ಹೇಳಿದರು.
ಉನ್ನತ ಶಿಕ್ಷಣ ಇಲಾಖೆಯಡಿ ನಿರ್ಮಿಸಿರುವ 13169 ವಿದ್ಯಾರ್ಥಿಗಳ ಸಾಮರ್ಥ್ಯದ 224 ವಸತಿ ನಿಲಯಗಳನ್ನು ಹಸ್ತಾಂತರಿಸಿಕೊಳ್ಳಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಿದ್ಧವಿದ್ದು, ಇದನ್ನು ಸಚಿವ ಸಂಪುಟದ ಮುಂದೆ ತರುವಂತೆ ತಿಳಿಸಿದರು.ಮುಂದಿನ ವರ್ಷ ಆಯವ್ಯಯ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದ ಗುಣಮಟ್ಟ ಸುಧಾರಣೆಗೆ ಪೂರ್ವಭಾವಿ ಸಭೆ ನಡೆಸಿ, ಕೈಗೊಳ್ಳಬೇಕಾದ ಕ್ರಮಗಳನ್ನು ಚರ್ಚಿಸಿ, ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
