ಬೆಂಗಳೂರುವ್ಯಾಸಂಗದ ಸಮಯದಲ್ಲಿಯೇ ಕೈಗಾರಿಕೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ತರಬೇತಿ ಮೂಲಕ ಉದ್ಯೋಗ ಕಲ್ಪಿಸುವ ಯೋಜನೆಗಳನ್ನು ಶಿಕ್ಷಣ ಕ್ಷೇತ್ರಗಳಿಗೆ ನೀಡಲಾಗಿದೆ. ಕೇಂದ್ರ ಬಜೆಟ್‌ನಲ್ಲಿ ಇದಕ್ಕಾಗಿ 1.25,,638 ಕೋಟಿ ರೂ. ಗಳನ್ನು ಅನುದಾನ ನೀಡಲಾಗಿದೆ.
500 ಕಂಪನಿಗಳಲ್ಲಿ ಇಂಟರ್ನ್‌ಶಿಪ್ಒಂದು ಕೋಟಿ ಯುವಕರಿಗೆ ಮುಂದಿನ ಐದು ವರ್ಷಗಳಲ್ಲಿ ದೇಶದ 500 ಟಾಪ್ ಕಂಪನಿಗಳಲ್ಲಿ ಇಂಟರ್ನ್‌ಶಿಪ್‌ಗೆ ಅವಕಾಶ ಕಲ್ಪಿಸಲಿದೆ. ವಿವಿಧ ವೃತ್ತಿಪರ ಹಾಗೂ ಉದ್ಯೋಗಾವಕಾಶಗಳಿಗಾಗಿ ಒಂದು ವರ್ಷದ ಅವಧಿಗೆ ವಿದ್ಯಾರ್ಥಿಗಳು ವಾಸ್ತವ ವಹಿವಾಟಿನ ಅನುಭವವನ್ನು ಪಡೆಯಲಿದ್ದಾರೆ. ಪ್ರತಿ ತಿಂಗಳಿಗೆ ಸರ್ಕಾರದಿಂದ ಐದು ಸಾವಿರ ರೂ. ಹಾಗೂ ಕಂಪನಿ ವತಿಯಿಂದ ಒಂದು ಬಾರಿಯ ನೆರವಾಗಿ 6 ಸಾವಿರ ರೂ. ಸೇರಿ ಮಾಸಿಕ 11 ಸಾವಿರ ರೂ.ಗಳನ್ನು ವಿದ್ಯಾರ್ಥಿಗಳು ಪಡೆಯಲಿದ್ದಾರೆ. ಕಂಪನಿಗಳು ಸಿಎಸ್‌ಆರ್ ನಿಧಿಯನ್ವಯ ತರಬೇತಿ ವೆಚ್ಚ ಹಾಗೂ ಇಂಟರ್ನ್‌ಶಿಪ್‌ನ ಶೇ.10 ವೆಚ್ಚ ಭರಿಸಬೇಕಾಗಲಿದೆ.
1,000 ಐಟಿಐಗಳು ಮೇಲ್ದರ್ಜೆಗೆಹಬ್ ಆ್ಯಂಡ್ ಸ್ಪೋಕ್ ಮಾದರಿಯಲ್ಲಿ ಮುಂದಿನ ಐದು ವರ್ಷಗಳ ಅವಧಿಯಲ್ಲಿ ಒಟ್ಟು ಒಂದು ಸಾವಿರ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಅಭಿವೃದ್ಧಿಪಡಿಸಲಾಗುವುದು. ರಾಜ್ಯಗಳು ಮತ್ತು ಉದ್ಯಮಗಳ ಸಹಭಾಗಿತ್ವದ ಕೇಂದ್ರೀಯ ಪುರಸ್ಕೃತ ಯೋಜನೆ ಇದಾಗಿದೆ. ಐದು ವರ್ಷಗಳಲ್ಲಿ ಇದಕ್ಕಾಗಿ 60 ಸಾವಿರ ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತದೆ. ಇದರಲ್ಲಿ ಕೇಂದ್ರದ ಪಾಲು 30 ಸಾವಿರ ಕೋಟಿ ರೂ.ಗಳಾದರೆ, ರಾಜ್ಯದಿಂದ 20 ಸಾವಿರ ಹಾಗೂ ಉದ್ಯಮಗಳಿಂದ 10 ಸಾವಿರ ಕೋಟಿ ರೂ.ಗಳ ಮೊತ್ತವನ್ನು ನಿರೀಕ್ಷಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
