ಬೆಂಗಳೂರು:ಬರ ಪರಿಹಾರ ಬಿಡುಗಡೆ ವಿಚಾರವಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರ ನಡುವಿನ ಹಗ್ಗ ಜಗ್ಗಾಟ್ಟಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಬರ ಪರಿಹಾರ ವಿಚಾರವಾಗಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್​ ಮೆಟ್ಟಿಲೇರಿತ್ತು. ವಿಚಾರಣೆ ಬಳಿಕ ಕೇಂದ್ರ ಸರ್ಕಾರವು 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ.
ಕರ್ನಾಟಕದ ಜೊತೆಗೆ ತಮಿಳುನಾಡಿಗೂ ಬರ ಪರಿಹಾರದ ಹಣ ಬಿಡುಗಡೆ ಮಾಡಲಾಗಿದ್ದು, ಈ ಮೂಲಕ ಬರ ಪರಿಹಾರ ಬಿಡುಗಡೆ ವಿವಾದ ತಾರ್ಕಿಕ ಅಂತ್ಯ ಕಂಡಂತಾಗಿದೆ.
2023ರಲ್ಲಿ ರಾಜ್ಯದಲ್ಲಿ ಸರಿಯಾಗಿ ಮಳೆಯಾಗದ ಕಾರಣ ಭೀಕರ ಬರಗಾಲ ಬಂದಿತ್ತು. ಈ ಹಿನ್ನೆಲೆ ಎನ್‌ಡಿಆರ್‌ಎಫ್‌ನಿಂದ ಬರ ಪರಿಹಾರ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರದ ಮುಂದೆ 18,174 ಕೋಟಿ ರೂ. ರಾಜ್ಯ ಸೆಪ್ಟೆಂಬರ್​ನಲ್ಲಿ ಬೇಡಿಕೆ ಇರಿಸಿತ್ತು. ಕರ್ನಾಟಕದ ಮನವಿ ಮೇರೆಗೆ ಅಧ್ಯಯನ ನಡೆಸಿ ಕೇಂದ್ರದ ತಂಡವೂ ವರದಿ ಸಲ್ಲಿಸಿತ್ತು. ಆದರೆ ಬರ ಪರಿಹಾರದ ಹಣವನ್ನು ಬಿಡುಗಡೆ ಮಾಡಿರಲಿಲ್ಲ.
ಇದನ್ನೂ ಓದಿ:ರಾಜ್ಯದ 11ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್​ ಘೋಷಣೆ
ಬರ ಪರಿಹಾರ ಬಿಡುಗಡೆ ಸಂಬಂಧ ರಾಜ್ಯ ಸರ್ಕಾರ ಹಲವು ಬಾರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಆದರೆ, ಸಕಾರಾತ್ಮಕ ಸ್ಪಂದನೆ ಸಿಗದೇ ಇದ್ದುದರಿಂದ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ತಾರತಮ್ಯ ಮಾಡುತ್ತಿದ್ದು, ಬರ ಪರಿಹಾರ, ತೆರಿಗೆ ಪಾಲು ನೀಡದೆ ರಾಜ್ಯಕ್ಕೆ ದ್ರೋಹ ಎಸಗಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಒಳಗೊಂಡಂತೆ ರಾಜ್ಯ ಕಾಂಗ್ರೆಸ್​ ಸರ್ಕಾರದ ಶಾಸಕರು, ಸಚಿವರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು.
ಬರ ಪರಿಹಾರ ವಿಳಂಬದ ಕಾರಣ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿ ಬರ ಪರಿಹಾರ ಬಿಡುಗಡೆಯ ಕುರಿತು ಒಂದು ವಾರದೊಳಗೆ ನಿರ್ಧರಿಸುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು. ಅದರಂತೆ ಶನಿವಾರ 3,454 ಕೋಟಿ ರೂ. ಬರ ಪರಿಹಾರವನ್ನು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ ಬಂದಿಲ್ಲ. ಆದರೆ, ಸ್ಥಾನಿಕ ಆಯುಕ್ತರು ಸಂಪರ್ಕಿಸಿದಾಗ ಕೇಂದ್ರದ ಹಣಕಾಸು ಇಲಾಖೆ ಅಧಿಕಾರಿಗಳು ಖಚಿತಪಡಿಸಿದ್ದಾರೆ. ನಾವು ಕೇಳಿದ್ದಕ್ಕಿಂತಲೂ ಕಡಿಮೆ ಮೊತ್ತ ನೀಡಿ ಅನ್ಯಾಯ ಮಾಡಿದ್ದಾರೆ. ಇನ್ನೂ ಬೇರೆ ವಿಷಯಗಳಿಗಾಗಿ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − seventeen =
Remember me
