ಬೆಂಗಳೂರು:ಮಂಡ್ಯ ಲೋಕಸಭೆ ಕ್ಷೇತ್ರದಿಂದ ಚುನಾಯಿತರಾಗಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಎಚ್.ಡಿ.ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿದ್ದರು. ಈಗ ಆ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಬೇಕಿದೆ.
ಶನಿವಾರ ಬೆಳಗಿನ ಜಾವ ತಿರುಪತಿ ತಿರುಮಲದ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದ ಅವರು ತಿರುಪತಿಯಿಂದ ಬೆಂಗಳೂರಿಗೆ ಬಂದು ವಿಧಾನಸೌಧದಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಬಿಜೆಪಿ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ವಿರುದ್ಧ ಸುಮಾರು 15 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು.
ಈಗ ಬಿಜೆಪಿ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಚನ್ನಪಟ್ಟಣದ ಅಭ್ಯರ್ಥಿ ಯಾರು ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.
ರಾಜೀನಾಮೆ ಸ್ವೀಕರಿಸಿದ ಸ್ಪೀಕರ್ ಯು.ಟಿ.ಖಾದರ್, ವಿಧಾನ ಮಂಡಲದ ಪರವಾಗಿ ಕುಮಾರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸಿದರಲ್ಲದೆ, ಕುದುರೆಮುಖ ಕಬ್ಬಿಣ ಕಾರ್ಖಾನೆ ಪುನಶ್ಚೇತನಕ್ಕೆ ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 − seven =
Remember me
