ಚಿತ್ರದುರ್ಗ:ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಂಭವಿಸಿದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಕೇಂದ್ರ ಸಚಿವ, ಚಿತ್ರದುರ್ಗ ಕ್ಷೇತ್ರದ ಸಂಸದ ಎ. ನಾರಾಯಣಸ್ವಾಮಿ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡಿರುವವರ ಆರೋಗ್ಯ ವಿಚಾರಿಸಿದ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಬಳಿಕ ಕವಾಡಿಗರಹಟ್ಟಿಗೆ ತೆರಳಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಆರು ಮಂದಿ ಸಾವಿಗೆ ಕಾರಣವಾದ ಡೇಂಜರ್ ಟ್ಯಾಂಕ್ ಡೆಮಾಲಿಷ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಘಟನೆಯ ಕುರಿತು ಮಾತನಾಡಿದ ಕೇಂದ್ರ ಸಚಿವ ನಾರಾಯಣಸ್ವಾಮಿ ಎಕೆ ಕಾಲೋನಿಗೆ ವಿಷ ಹಾಕಿದ್ದಾರೆ ಎಂದು ಆರೋಪ ಮಾಡಲಾಗುತ್ತಿದೆ. FSL ರಿಪೋರ್ಟ್ ಬಂದಿದೆ, ನೀರಿನಲ್ಲಿ ವಿಷಾಂಶ ಇಲ್ಲ ಕಾಲೆರಾ ಇದೆ ಎಂದು ಉಲ್ಲೇಖಿಸಲಾಗಿದೆ. ನಾಳೆ ಕೇಂದ್ರದಿಂದ ರ್‍ಯಾಪಿಡ್​ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ಮಾಡಲಿದೆ ಎಂದು ತಿಳಿಸಿದ್ದಾರೆ.
ಟ್ಯಾಂಕ್​ನಲ್ಲಿ ವಿಷ ಬೆರೆಸಿದ್ದರೆ ವಾಂತಿ ಮಾತ್ರ ಆಗುತ್ತದೆ, ಸಾವು ಸಂಭವಿಸುತ್ತದೆ. ಕಲುಷಿತ ನೀರಾಗಿದ್ರೆ ವಾಂತಿ ಭೇದಿ ಆಗುತ್ತದ ಸಾವು ಸಂಭವಿಸಲ್ಲ. ಈ ಘಟನೆ ಬಗ್ಗೆ ಉನ್ನತಮಟ್ಟದ ತನಿಖೆ ಆಗಬೇಕಿದೆ. FSL​​ ವರದಿ, ಮರಣೋತ್ತರ ಪರೀಕ್ಷೆ ವರದಿ ನೋಡಿ ಕ್ರಮ ಕೈಗೊಳ್ಳಲಾಗುವುದು.
ಟ್ಯಾಂಕರ್​ ಒಳಗೆ ಇಳಿದು ಪರಿಶೀಲನೆ ನಡೆಸಿದಾಗ ಆ ನೀರು ಪ್ರಾಣಿಗಳು ಕುಡಿಯಲು ಸಹ ಯೋಗ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಈ ಸಂಬಂಧ ಡೇಂಜರ್ ಟ್ಯಾಂಕ್ ಡೆಮಾಲಿಷ್ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮತ್ತೊಂದು ರಿಪೋರ್ಟ್​ ನೀಡುವಂತೆ ಹೇಳಿದ್ದೇನೆ. ಎರಡು ದಿನ ವರದಿ ಬರುತ್ತೆ, ಕಾದು ನೋಡೋಣ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ:ವಿಷಜಲ ಪ್ರಕರಣ| ಕಣ್ಣು ಬಿಡುವ ಮುನ್ನವೇ ಸಾವಿನ ಕದ ತಟ್ಟಿದ ನವಜಾತ ಶಿಶು; ಮೃತರ ಸಂಖ್ಯೆ ಆರಕ್ಕೆ ಏರಿಕೆ
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ ಕವಾಡಿಗರಹಟ್ಟಿಯಲ್ಲಿ ನೀರು ಕುಡಿಯಲು ಯೋಗ್ಯವಿರಲಿಲ್ಲ ಈ ಕುರಿತು ಮೈಕ್ರೋ ಬಯೋಲಾಜಿಕಲ್ ರಿಪೋರ್ಟ್ ಬಂದಿದೆ. ಮೇಲ್ನೋಟಕ್ಕೆ ಕರ್ತವ್ಯ ಲೋಪ ಕಂಡು ಬಂದಿದ್ದು, ಈ ಹಿನ್ನೆಲೆ ಒಬ್ಬ ಎಇಇ, ಜೂನಿಯರ್ ಇಂಜಿನಿಯರ್​ಅನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ.
ಈ ಸಂಬಂಧ ತ್ವರಿತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳದಂತೆ ಆದೇಶಿಸಲಾಗಿದೆ. ರ್‍ಯಾಪಿಡ್​ ತಜ್ಞರ ತಂಡ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ವರದಿಯನ್ನು ಆಧರಿಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಚಿತ್ರದುರ್ಗ ಜಿಲ್ಲಾಧಿಕಾರಿ ದಿವ್ಯ ಪ್ರಭು ಘಟನೆ ಕುರಿತು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 2 =
Remember me
