ವಿಜಯಪುರ:ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡಿದ. ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ ವಿಜಯಪುರ‌ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಗುರುವಾರ ಸಂಜೆ ಈ ಅಪಘಾತ ಸಂಭವಿಸಿದೆ.
ಕೇಂದ್ರ ಸಚಿವೆ ಪ್ರಯಾಣ ಮಾಡುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಕೇಂದ್ರ ಸಚಿವರಿಗೆ ಹಾಗೂ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಸಚಿವೆ ಹಾಗೂ ಕಾರು ಚಾಲಕನನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆ. ಯಾರಿಗೂ ಗಂಭೀರ ಗಾಯವಾಗಿಲ್ಲ ಎಂದು ಪೊಲೀಸರ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಪ್ರೇಮ ವಿವಾಹವಾಗಿ ಪತಿಯನ್ನು ಬಿಟ್ಟು ತವರಿಗೆ ಬಂದಿದ್ದವಳ ಪ್ರಾಣವೇ ಹೋಯ್ತು; ತಂದೆಯೇ ಕೊಂದಿದ್ದೇಕೆ?
ವಿಜಯಪುರ ನಗರದಲ್ಲಿ ಇಂದು ನಡೆದ ಬಿಜೆಪಿ ಮಹಿಳಾ ಸಮಾವೇಶ ಹಾಗೂ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಕೇಂದ್ರ ಸಚಿವೆ ವಿಜಯಪುರದಲ್ಲಿ ನಡೆದ ಕಾರ್ಯಕ್ರಮಗಳ ಬಳಿಕ ಬಾಗಲಕೋಟೆಯತ್ತ ಪ್ರಯಾಣ ಬೆಳೆಸಿದ್ದರು. ಅಷ್ಟರಲ್ಲಿ ಈ ಅವಘಡ ಸಂಭವಿಸಿದೆ. ಅಪಘಾತದ ಪರಿಣಾಮ‌ ಎನ್ಎಚ್ 50ರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಟ್ರಾಫಿಕ್ ಜಾಮ್ ಕ್ಲಿಯರ್ ಮಾಡಿದ್ದಾರೆ.


ಇಬ್ರಿಗೂ ಒಬ್ನೇ ಪತಿ, ಶಿಫ್ಟ್​ನಲ್ಲಿ ಸಂಸಾರ: ವಾರದಲ್ಲಿ 3 ದಿನ ಆ ಪತ್ನಿಗೆ, ಇನ್ನು 3 ದಿನ ಈ ಪತ್ನಿಗೆ; ಭಾನುವಾರ ಮಾತ್ರ ಗಂಡ ಫ್ರೀ!

ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + twelve =
Remember me
