ಬೆಂಗಳೂರು: ರಾಜ್ಯಕ್ಕೆ ಸಿಗಬೇಕಾದ ತೆರಿಗೆ ಪಾಲು ನೀಡದ, ಕೇಂದ್ರ ದಿಂದ ಕರ್ನಾಟಕಕ್ಕೆ ಬರಬೇಕಾದ 5 ಸಾವಿರ ಕೋಟಿ ರೂ. ತಪ್ಪಿಸಿದ ನಿರ್ಮಲಾ ಸೀತಾರಾಮನ್ ಕನ್ನಡಿಗರಿಗೆ ದ್ರೋಹ ಬಗೆದಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇದನ್ನೂ ಓದಿ:ಕರೊನಾ ಬಿಕ್ಕಟ್ಟು ನಿರ್ವಹಣೆಗಾಗಿ 20 ಲಕ್ಷ ಕೋಟಿ ರೂ.ವಿಶೇಷ ಆರ್ಥಿಕ ಪ್ಯಾಕೇಜ್​ ಘೋಷಿಸಿದ ಪ್ರಧಾನಿ ಮೋದಿ
ಪಿಎಂ ಕೇರ್ಸ್ ನಿಧಿಯಲ್ಲಿ 35 ಸಾವಿರ ಕೋಟಿ ರೂ. ಸಂಗ್ರಹವಾಗಿದೆ. ಕರ್ನಾಟಕದಿಂದ ಮೂರು ಸಾವಿರ ಕೋಟಿ ರೂ. ಹೋಗಿದೆ. ಕಾರ್ವಿುಕರ ಪ್ರಯಾಣ ವೆಚ್ಚಕ್ಕೆ ಈ ದುಡ್ಡನ್ನಾದರೂ ಕೊಡಲು ಮೋದಿಗೆ ಏನು ಕಷ್ಟ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ಇದನ್ನೂ ಓದಿ:ಸ್ಥಳೀಯ ಉತ್ಪನ್ನಗಳ ಮಹತ್ವ ತಿಳಿಸಿದೆ ಕೊವಿಡ್​-19, ಸ್ವಾವಲಂಬಿಯಾಗುವುದೇ ಗುರಿ: ಪ್ರಧಾನಿ ಮೋದಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮಾತನಾಡಿ, ಕರೊನಾ ನಿರ್ವಹಣೆಯಲ್ಲಿ ಪ್ರತಿ ಹಂತದಲ್ಲೂ ಮತ್ತೆ ಮತ್ತೆ ಎಡವಟ್ಟು ಮಾಡಿಕೊಂಡು ಯೂ ಟರ್ನ್ ಸರ್ಕಾರವಾಗಿ ಕಾಣಿಸಿದೆ ಎಂದು ಲೇವಡಿ ಮಾಡಿದರು.
ಇದನ್ನೂ ಓದಿ:ಹೂಡಿಕೆ ಆಕರ್ಷಣೆಗೆ ‘ಟ್ಯಾಕ್ಸ್ ಹಾಲಿಡೆ?’
ಇದುವರೆಗೂ ಸರ್ಕಾರ ಕರೊನಾ ನಿರ್ವಹಣೆಗೆ ಎಷ್ಟು ಹಣ ನೀಡಿದೆ, ಅದರಲ್ಲಿ ಎಷ್ಟು ಖರ್ಚಾಗಿದೆ, ಆ ಹಣ ಯಾರಿಗೆ ಸೇರಿದೆ, ದೇಣಿಗೆ ಎಷ್ಟು ಕಲೆಹಾಕಲಾಗಿದೆ ಎಂಬ ವಿಚಾರವಾಗಿ ಒಂದೇ ಒಂದು ಸ್ಪಷ್ಟ ಮಾಹಿತಿಯನ್ನು ಜನರಿಗೆ ನೀಡಲು ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಹೀಗಾಗಿ ಸರ್ಕಾರ ಕೋವಿಡ್ ವಿಚಾರವಾಗಿ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ:ಸಿದ್ಧವಾಗಿರಿ… ಹೊಸ ನಿಯಮಗಳೊಂದಿಗೆ ಜಾರಿಯಾಗಲಿದೆ ಲಾಕ್​ಡೌನ್​ 4.0: ಪ್ರಧಾನಿ ಮೋದಿ
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯ ಸೋಮವಾರ ಬಿಡುಗಡೆ ಮಾಡಿದ ಹಣಕಾಸು ಆಯೋಗದ ವರದಿ ಪ್ರಕಾರ ರೆವಿನ್ಯೂ ಡಿಫಿಸಿಟ್ ಗ್ರಾಂಟ್ ಆಡಿಯಲ್ಲಿ ನೀಡಲಾಗುವ ಹಣವನ್ನು 14 ರಾಜ್ಯಗಳಿಗೆ ನೀಡಲಾಗಿದೆ. ಆದರೆ, ಕರ್ನಾಟಕಕ್ಕೆ ನೀಡಿಲ್ಲ. ರಾಜ್ಯದಿಂದ ಆಯ್ಕೆಯಾಗಿರುವ ನಿರ್ಮಲಾ ತಾರತಮ್ಯ ಧೋರಣೆ ಅನುಸರಿಸಿದ್ದಾರೆಂದರು.
ಇದನ್ನೂ ಓದಿ:ಕ್ಲಿನಿಕಲ್ ಪರೀಕ್ಷಾ ಹಂತದಲ್ಲಿ ಲಸಿಕೆ…!
ತಬ್ಲಿಘಿ ಹೆಸರಲ್ಲಿ ವಾಗ್ವಾದ:ಕರೊನಾ ವ್ಯಾಪಿಸುತ್ತಿರುವ ಬೆನ್ನಲ್ಲೇ ತಬ್ಲಿಘಿಗಳ ಹೆಸರು ಈಗ ರಾಜಕೀಯ ಸಮರಕ್ಕೆ ಸರಕಾಗಿದೆ. ತಬ್ಲಿಘಿಗಳಿಗೆ ಬಿಜೆಪಿ 13 ಪ್ರಶ್ನೆ ಕೇಳಿ ಟೀಕಿಸಿದ ಬೆನ್ನಲ್ಲೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ತಬ್ಲಿಘಿ ಸಮಾವೇಶಕ್ಕೆ ಅನುಮತಿ ಕೊಟ್ಟವರು ಯಾರು ಎಂದು ಪ್ರಶ್ನಿಸುವ ಮೂಲಕ ಕೇಂದ್ರದ ವಿರುದ್ಧ ದನಿ ಎತ್ತಿದ್ದಾರೆ. ದೆಹಲಿಯಲ್ಲಿ ತಬ್ಲಿಘಿ ಸಮಾವೇಶಕ್ಕೆ ಕೇಂದ್ರ ಸರ್ಕಾರವೇ ಪರವಾನಗಿ ಕೊಟ್ಟಿದ್ದು ಮೊದಲನೇ ತಪ್ಪು. ಸೋಂಕು ತಡೆಗಟ್ಟದೇ ಹೋಗಿದ್ದು 2ನೇ ತಪ್ಪು. ಇದಕ್ಕೆ ಕೇಂದ್ರವೇ ಹೊಣೆ ಎಂದು ದೂರಿದ್ದಾರೆ.
54 ವರ್ಷದ ಮಹಿಳೆಗೆ ಅವಳಿ ಮಕ್ಕಳು, ಪತಿಗೆ 64 ವರ್ಷ- ದಂಪತಿಯ ಬದುಕೇ ಒಂದು ಕರುಣಾಜನಕ ಕಥೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − twelve =
Remember me
