ಬೆಂಗಳೂರು :ಎಲ್ಲ ಗುರುಗಳ ಆಶೀರ್ವಾದದಿಂದ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಮೋದಿ ಸಂಪುಟದಲ್ಲಿ ಮಂತ್ರಿಯಾಗಿದ್ದು, ದೇಶ ಮತ್ತು ರಾಜ್ಯದ ಅಭಿವೃದ್ಧಿಗೆ ಶ್ರಮಿಸುವುದಾಗಿ ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಶ್ರೀಮದ್ವೀರಶೈವ ಸದ್ಭೋದನಾ ಸಂಸ್ಥೆ ಆಶ್ರಯದಲ್ಲಿ ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಆಯೋಜಿಸಿದ್ದ ಶ್ರೀರಂಭಾಪುರಿ ಜಗದ್ಗುರುಗಳ ಇಷ್ಟಲಿಂಗ ಮಹಾಪೂಜೆ ಹಾಗೂ ಧರ್ಮೋತ್ತೇಜಕ ಸಂಗಮ ಸಮಾವೇಶದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನೆನೆಗುದಿಗೆ ಬಿದ್ದಿದ್ದ ರಾಜ್ಯದ ಬಹುಬೇಡಿಕೆಯ ಹಲವು ರೈಲ್ವೇ ಯೋಜನೆಗಳನ್ನು ಪೂರ್ಣಗೊಳಿಸಲು ಕೈಗೆತ್ತಿಕೊಳ್ಳಲಾಗಿದೆ. ರೈಲ್ವೆ ಲೆವೆಲ್ ಕ್ರಾಸಿಂಗ್​ ಕಾಮಗಾರಿಗಾಗಿ ಸುಮಾರು 860 ಕೊಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ವಿಶೇಷವಾಗಿ ಶಿವಮೊಗ್ಗದಿಂದ ಶೃಂಗೇರಿ ಮಾರ್ಗವಾಗಿ ಮಂಗಳೂರಿಗೆ ಹೊಸ ರೈಲು ಮಾರ್ಗದ ಪ್ರಸ್ತಾವನೆ ಬಂದಿದ್ದು ಡಿಪಿಆರ್ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.
ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಘೋಷಣೆಯಾಗಿದ್ದ ಶಿವಮೊಗ್ಗದಿಂದ ಶಿಕಾರಿಪುರ ಮಾರ್ಗವಾಗಿ ರಾಣಿಬೆನ್ನೂರು ಸಂಪರ್ಕ ಕಲ್ಪಿಸುವ ಹೊಸ ರೈಲ್ವೇ ಯೋಜನೆಯ ಕಾಮಗಾರಿಯನ್ನು 2027ರ ಹೊತ್ತಿಗೆ ಮುಕ್ತಾಯ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ ಎಂದರು.
ಹಣೆಬರಹ ಯಾರ ಸ್ವತ್ತಲ್ಲ. ಸೋಮಣ್ಣನ ಭವಿಷ್ಯ ಮುಗಿದೇ ಹೋಯಿತು ಎನ್ನುವ ಸಂದರ್ಭದಲ್ಲಿ ಎರಡು ಕ್ಷೇತ್ರದಲ್ಲಿ ಸೋಲು ಕಂಡಿದ್ದ ನನಗೆ ನರೇಂದ್ರ ಮೋದಿಯವರು ತುಮಕೂರಿನಿಂದ ಟಿಕೆಟ್ ಕೊಟ್ಟರು. ಸಿದ್ಧಗಂಗೆ, ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ, ಶ್ರೀರಂಭಾಪರಿ ಲಿಂಗೈಕ್ಯ ವೀರಗಂಗಾಧರ ಜಗದ್ಗುರುಗಳ ಆಶೀರ್ವಾದದಿಂದ ಬಹುದೊಡ್ಡ ಅಂತರದಿಂದ ಗೆದ್ದು ಮಂತ್ರಿಯಾಗಿದ್ದೇನೆ. ಹಗ್ಗಕಟ್ಟಿ ಕೂರಿಸಿದರೂ ಸುಮ್ಮನೆ ಕೂರುವ ಜಾಯಮಾನ ನನ್ನದಲ್ಲ. ಸ್ವಲ್ಪ ನೇರವಾಗಿ ಮಾತನಾಡುವ ಸ್ವಭಾವ ನನ್ನದು ಎಂದ ಸೋಮಣ್ಣ ನಾನು ಕಾರ್ಯಕ್ರಮದಿಂದ ನಿರ್ಗಮಿಸಿದ್ದಕ್ಕೆ ವಿಜಯೇಂದ್ರ ಬಂದ ಕೂಡಲೇ ಸೋಮಣ್ಣ ನಿರ್ಗಮನ ಅಂತ ಮಾಧ್ಯಮದವರು ತಪ್ಪು ಅರ್ಥ ಬರುವಂತೆ ಬರೆಯಬೇಡಿ. ನಾವೆಲ್ಲರೂ ಚನ್ನಾಗಿದ್ದೇವೆ. ಜನ ಸರಿಯಾಗಬೇಕು ಅಷ್ಟೆ ಎಂದು ಸಿಳ್ಳೆ ಹೊಡೆದ ಯುವಕರಿಗೆ ಸೋಮಣ್ಣ ಗದರಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
