ಬೆಂಗಳೂರು:ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬದ ಒಡೆತನವಿರುವ ಸಿದ್ಧಸಿರಿ ಎಥೆನಾಲ್ ಮತ್ತು ಪವರ್ ಘಟಕ ಮುಚ್ಚುವ ಸಂಬಂಧ ಅವರ ಅರ್ಜಿದಾರರ ಸೂಚನೆ ಪಡೆದು ತಿಳಿಸುವಂತೆ ಕರ್ನಾಟಕ ಹೈಕೋಟ್ ಸೋಮವಾರ ಹೇಳಿದೆ.
ಯತ್ನಾಳ್ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕರಾಗಿರುವ ರಮಣಗೌಡ ಬಿ ಪಾಟೀಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ. ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರವಾಗಿ ವಾದಿಸಿದ ವಕೀಲ ವೆಂಕಟೇಶ್ ದಳವಾಯಿ, ರಾಜಕೀಯ ಕಾರಣಕ್ಕಾಗಿ ಘಟಕ ಮುಚ್ಚಲು ಒತ್ತಾಯಿಸಲಾಗುತ್ತಿದೆ ಎಂದು ಆಕ್ಷೇಪಿಸಿದರು.
ಆಗ ಪೀಠವು 2021ರಲ್ಲಿ ಕಾರ್ಖಾನೆ ಖರೀದಿಸಿದ್ದೀರಿ. ನಾವೀಗ 2024ರಲ್ಲಿದ್ದೇವೆ. ಈ ಅವಧಿಯಲ್ಲಿ ನೀವು ಅಗತ್ಯ ಅನುಮತಿ ಪಡೆಯಬೇಕಿತ್ತು. ಕಾನೂನಿನ ಪ್ರಕಾರ ನೀವು ಅನುಮತಿ ಪಡೆಯುವವರೆಗೆ ಕಾರ್ಖಾನೆ ನಡೆಸಲಾಗದು ಎಂದಿತು.
ವಿಚಾರಣೆಯ ಒಂದು ಹಂತದಲ್ಲಿ ಪೀಠವು ಕಾರ್ಖಾನೆ ನಡೆಸುವುದಿಲ್ಲ ಎಂಬ ಮುಚ್ಚಳಿಕೆಯನ್ನು ದಾಖಲಿಸಿಕೊಳ್ಳಬಹುದೇ? ಹಾಗಾದಲ್ಲಿ ಸರ್ಕಾರ ನಿಮ್ಮ ಮನವಿ ಪರಿಗಣಿಸಲಿದೆ. ನಿಮ್ಮ ಮುಚ್ಚಳಿಕೆ ಪರಿಗಣಿಸಿ, ಆದೇಶ ಮಾಡುವಂತೆ ಸರ್ಕಾರಕ್ಕೆ ಆದೇಶಿಸುತ್ತೇವೆ. 2021ರಲ್ಲಿ ಕಾರ್ಖಾನೆ ಖರೀದಿಸಿದ್ದು, ಸರ್ಕಾರ ನಿಮ್ಮ ಮನವಿ ಪರಿಗಣಿಸಲಿಲ್ಲ ಎಂದಿದ್ದರೆ ಒಪ್ಪಬಹುದಿತ್ತು. ಈ ವಿಚಾರದಲ್ಲಿ ನೀವು ಸ್ಪಷ್ಟ ನಿಲುವು ತೆಗೆದುಕೊಳ್ಳಬೇಕು ಎಂದು ಹೇಳಿತು.
ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ಕಾರ್ಖಾನೆಯನ್ನು ನಿಯಮದ ಪ್ರಕಾರವಾಗಿ ನಡೆಸುತ್ತಿಲ್ಲ. ಈ ಕಾರಣದಿಂದಾಗಿ ಕ್ರಮ ಕೈಗೊಳ್ಳಲಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.
ಆಗ ಪೀಠವು, ಕಾರ್ಖಾನೆ ಮುಚ್ಚುವ ಸಂಬಂಧ ಅರ್ಜಿದಾರರಿಂದ ಸೂಚನೆ ಪಡೆದು ಗುರುವಾರ ತಿಳಿಸಬೇಕು ಎಂದು ಸೂಚಿಸಿ, ವಿಚಾರಣೆಯನ್ನು ಫೆ.8ಕ್ಕೆ ಮುಂದೂಡಿತು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 + two =
Remember me
