ಆಂಧ್ರಪ್ರದೇಶ:ಅನ್ನಮಯ್ಯ ಜಿಲ್ಲೆಯ ಮದನಪಲ್ಲಿ ಪಟ್ಟಣದಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ಅಲ್ತಾಫ್ (19) ಎಂಬ ಯುವಕನ ಮೇಲೆ ಮೂವರು ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಸೋಮವಾರ ಅಲ್ತಾಫ್ ಮನೆಯಿಂದ ಹೊರಗೆ ಬರುತ್ತಿದ್ದಾಗ ಪಲ್ಸರ್ ಬೈಕ್ ನಲ್ಲಿ ಬಂದ ಮೂವರು ಯುವಕರು ಅಡ್ಡಗಟ್ಟಿದ್ದಾರೆ. ಆ ನಂತರ ಬಲವಂತವಾಗಿ ಬೈಕ್ ನಲ್ಲಿ ಎಳೆದೊಯ್ದು ಪಟ್ಟಣ ಸಮೀಪವಿರುವ ನವೋದಯ ಶಾಲೆ ಬಳಿ ಕರೆದೊಯ್ದಿದ್ದಾರೆ. ಎಲ್ಲರೂ ನೋಡ ನೋಡುತ್ತಿರುವಾಗಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.
ಸ್ಥಳೀಯರು ಯುವಕರನ್ನು ಹಿಡಿಯಲು ಯತ್ನಿಸಿದಾಗ ಓಡಿ ಹೋಗಿದ್ದಾರೆ. ಬೆಂಕಿಯನ್ನು ನಿಯಂತ್ರಿಸಿದ ಬಳಿಕ ಗಂಭೀರವಾಗಿ ಗಾಯಗೊಂಡಿರುವ ಅಲ್ತಾಫ್​​​​ನನ್ನು 108 ಸಿಬ್ಬಂದಿ ಮದನಪಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಸಂತ್ರಸ್ತ ಯುವಕನ ಪೋಷಕರ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಲ್ತಾಫ್ ಅವರನ್ನು ಡಿಎಸ್ಪಿ ಭೇಟಿ ಮಾಡಿದ್ದು, ಪೋಷಕರಿಗೆ ಧೈರ್ಯ ತುಂಬಿದ್ದಾರೆ. ಪ್ರೇಮ ಪ್ರಕರಣವೇ ಘಟನೆಗೆ ಕಾರಣ ಎನ್ನಲಾಗಿದೆ. ಸಂಪೂರ್ಣ ವಿವರ ತಿಳಿಯಬೇಕಿದೆ.
ರಾಷ್ಟ್ರ ರಾಜಧಾನಿಯಲ್ಲಿ ನಿತ್ಯ ಕಳ್ಳತನ; ಆರು ತಿಂಗಳಲ್ಲಿ ಕಳುವಾಗಿರುವ ವಾಹನಗಳೆಷ್ಟು ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 8 =
Remember me
