ಬೆಂಗಳೂರು:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮತ್ತು ಸಮಸ್ಯೆ ಪರಿಸಹರಿಸುವಂತೆ ಆಗ್ರಹಿಸಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘವು ಆ.23 ಮತ್ತು 24ರಂದು ‘ಶಾಲೆ ತೊರೆಯುವ ಅಭಿಯಾನ’ ನಡೆಸಲು ನಿರ್ಧರಿಸಿದೆ.
ಕಳೆದ 11-12 ವರ್ಷಗಳಿಂದ ಕಡಿಮೆ ವೇತನ, ಸೇವಾ ಭದ್ರತೆ, ಕೃಪಾಂಕ ಸೇರಿ ಯಾವುದೇ ರೀತಿಯ ಸೌಲಭ್ಯಗಳಿಲ್ಲದೆ ಸಂಘದ ಸದಸ್ಯರು ಪ್ರಾಮಾಣಿಕವಾಗಿ ಶೈಕ್ಷಣಿಕವಾಗಿ ಬದುಕು ಕಟ್ಟಿಕೊಳ್ಳುವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೇ ವಿಚಾರವಾಗಿ ಕಳೆದ ತಿಂಗಳು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಹೋರಾಟ ಮಾಡಿದ್ದೇವು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು.
ಆದರೆ, ಸಮಸ್ಯೆಗಳನ್ನು ಬಗೆಹರಿಸುವ ಯಾವುದೇ ಆದೇಶಗಳು ಸರ್ಕಾರದಿಂದ ಪ್ರಕಟವಾಗಿಲ್ಲ. ಈ ಹಿನ್ನೆಲೆಯಲ್ಲಿ ಸಾಮೂಹಿಕವಾಗಿ ಮತ್ತು ಸಾಂಕೇತಿಕವಾಗಿ ರಾಜ್ಯಾದ್ಯಂತ 2 ದಿನಗಳ ಕಾಲ ಎಲ್ಲ ಅತಿಥಿ ಶಿಕ್ಷಕರು ‘ಶಾಲೆ ತೊರೆಯುವ ಅಭಿಯಾನ’ ಕೈಗೊಂಡಿದ್ದೇವೆ ಎಂದು ಸಂಘದ ಅಧ್ಯಕ್ಷ ಹನುಮಂತ ಎನ್.ಎಚ್. ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 5 =
Remember me
