ಬೆಂಗಳೂರು:ನಾಲ್ಕು ತಿಂಗಳ ಬಾಕಿ ವೇತನ ಪಾವತಿ ಹಾಗೂ ಸೇವಾ ಭದ್ರತೆಗೆ ಆಗ್ರಹಿಸಿ ರಾಜ್ಯವ್ಯಾಪಿ ಡಯಾಲಿಸಿಸ್ ಕೇಂದ್ರಗಳ ಸಿಬ್ಬಂದಿ ಕಳೆದೆರಡು ದಿನಗಳಿಂದ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸುತ್ತಿರುವ ಪ್ರತಿಭಟನೆಯಿಂದಾಗಿ ರೋಗಿಗಳು ಪರದಾಡುವ ಸ್ಥಿತಿ ಮುಂದುವರಿದಿದೆ. ಆದರೆ, ಸಮಸ್ಯೆ ಪರಿಹರಿಸಲು ಸಚಿವರು ಹಾಗೂ ಅಧಿಕಾರಿಗಳು ಗಮನಹರಿಸಿಲ್ಲ. ಪರಿಣಾಮ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ.
ಪ್ರತಿಭಟನಾ ಸ್ಥಳಕ್ಕೆ ಗುರುವಾರ ಭೇಟಿ ನೀಡಿದ್ದ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಮನವಿ ಸ್ವೀಕರಿಸಿ, ಆರೋಗ್ಯ ಸಚಿವರೊಂದಿಗೆ ಸಭೆ ಏರ್ಪಡಿಸುವ ಭರವಸೆ ನೀಡಿದ್ದರು. ಆದರೆ, ಶುಕ್ರವಾರ ಅಧಿಕಾರಿಗಳಾಗಲಿ, ಸಚಿವರಾಗಲಿ ಸ್ಥಳಕ್ಕೆ ಭೇಟಿ ನೀಡಿಲ್ಲ. ಇದು ಪ್ರತಿಭಟನಾನಿರತರನ್ನು ಕೆರಳಿಸಿದೆ.
ಆಗಸ್ಟ್​ನಲ್ಲಿ ಪ್ರತಿಭಟನೆ ನಡೆಸಿದ್ದಾಗ ನೀಡಲಾಗಿದ್ದ ‘ಹದಿನೈದು ದಿನಗಳಲ್ಲಿ ಸಮಸ್ಯೆ ಬಗೆಹರಿಸುವ’ ಆಶ್ವಾಸನೆ ಈವರೆಗೂ ಈಡೇರಿಲ್ಲ. ಡಯಾಲಿಸಿಸ್ ಕೇಂದ್ರಗಳ ನಿರ್ವಹಣೆ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಂಡ ನಂತರವೂ ವೇತನ ಪಾವತಿಯಾಗುತ್ತಿಲ್ಲ. ಹೀಗಾಗಿ ನಾವು ಮೌಖಿಕ ಭರವಸೆಗೆ ಮಣಿಯುವುದಿಲ್ಲ ಎಂದು ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದರು. ಸಚಿವರೊಂದಿಗೆ ಸಭೆ ಏರ್ಪಡಿಸುವ ಭರವಸೆ ನೀಡಿದ್ದ ಅಧಿಕಾರಿಗಳು, ‘ಸಚಿವರು ರಾಜಧಾನಿಯಲ್ಲಿಲ್ಲ. ಆರೋಗ್ಯ ಸೌಧದಲ್ಲಿ ರ್ಚಚಿಸೋಣ ಬನ್ನಿ’ ಎಂದು ಫೋನ್ ಮಾಡಿ ಕರೆದರು.
ಪ್ರತಿ ಬಾರಿ ಇದೇ ರೀತಿ ಸುಳ್ಳು ಭರವಸೆ ನೀಡುತ್ತಿರುವುದರಿಂದ ಚರ್ಚೆಗೆ ಹೋಗಲಿಲ್ಲ. ಸಚಿವರೊಂದಿಗೆ ಸಭೆ ಆಯೋಜಿಸಿ ಬೇಡಿಕೆಗಳ ಈಡೇರಿಕೆ ಕುರಿತು ಲಿಖಿತ ಭರವಸೆ ನೀಡಬೇಕು. ಬಾಕಿ ವೇತನ ಪೂರ್ಣವಾಗಿ ಪಾವತಿಸಬೇಕು, ಅಲ್ಲಿಯವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಪ್ರತಿಭಟನಾಕಾರರು ವಿಜಯವಾಣಿಗೆ ತಿಳಿಸಿದರು.
ಏಕಬಳಕೆಯ ಡಯಾಲಿಸಿಸ್:ಡಯಾಲಿಸಿಸ್ ಸೇವೆಯನ್ನು ಸದೃಢಗೊಳಿಸಲು ಡಯಾಲಿಸಿಸ್ ಕೇಂದ್ರಗಳನ್ನು 173ರಿಂದ 219ಕ್ಕೆ ಹೆಚ್ಚಿಸಲಾಗಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ 800 ಏಕಬಳಕೆಯ ಡಯಾಲಿಸಿಸ್ ಯಂತ್ರಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ. ಇದರಿಂದ ಗುಣಮಟ್ಟದ ಜತೆಗೆ ಸೋಂಕುರಹಿತ ಸೇವೆ ದೊರೆಯಲಿದೆ. ಕೇಂದ್ರಗಳ ನಿರ್ವಹಣೆ ಸಂಬಂಧ ನಾಲ್ಕು ವಿಭಾಗವಾರು ಟೆಂಡರ್ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಬೆಂಗಳೂರು ವಿಭಾಗದಲ್ಲಿ 250, ಮೈಸೂರು 222, ಬೆಳಗಾವಿ 201 ಹಾಗೂ ಕಲಬುರಗಿ ವಿಭಾಗದಲ್ಲಿ 127 ಯಂತ್ರಗಳನ್ನು ಅಳವಡಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಸಚಿವರು ಹೇಳೋದೇನು?:ಆರೋಗ್ಯ ಸಚಿವನಾದ ಬಳಿಕ ಡಯಾಲಿಸಿಸ್ ಸೇವೆ ಬಲಪಡಿಸುವ ನಿಟ್ಟಿನಲ್ಲಿ ಗಮನಹರಿಸಲಾಗಿದೆ. ಬಿಆರ್​ಎಸ್ ಹಾಗೂ ಎಸ್ಕಾಗ್ ಸಂಜೀವಿನಿ ಸಂಸ್ಥೆಗಳು ಬಾಕಿ ಉಳಿಸಿಕೊಂಡಿರುವ ಪಿಎಫ್, ಇಎಸ್​ಐ ಹಾಗೂ ವೇತನವನ್ನು ಆರ್ಥಿಕ ಇಲಾಖೆ ಅನುಮತಿ ಪಡೆದ ನಂತರ ಬಿಡುಗಡೆಗೊಳಿಸ ಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ. ಇದಲ್ಲದೆ, ಈ ಸಂಸ್ಥೆಗಳನ್ನು ಕಪು್ಪಪಟ್ಟಿಗೆ ಸೇರಿಸುವ ನಿಟ್ಟಿನಲ್ಲೂ ಇಲಾಖೆ ಕ್ರಮವಹಿಸಿದೆ. ಹೀಗಾಗಿ ಸಿಬ್ಬಂದಿ ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸಚಿವರು ಮನವಿ ಮಾಡಿದ್ದಾರೆ.
ಸಚಿವರಾಗಲಿ, ಅಧಿಕಾರಿಗಳಾಗಲಿ ನಮ್ಮ ಬಳಿ ಬಂದಿಲ್ಲ. ಖುದ್ದು ಲಿಖಿತ ಭರವಸೆ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಆರ್ಥಿಕ ಇಲಾಖೆಯೊಂದಿಗೆ ಮಾತುಕತೆ ನಡೆಸಿ ಹಣ ಬಿಡುಗಡೆ ಮಾಡುವುದು ಯಾವಾಗ? ಅಲ್ಲಿಯವರೆಗೂ ನಮ್ಮ ಕುಟುಂಬ ನಿರ್ವಹಣೆ ಹೇಗೆ? ಬಾಕಿ ಸಂಬಳ ಸಿಗುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ.
| ಮುಷ್ಕರ ನಿರತ ಸಿಬ್ಬಂದಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
