ಬೆಂಗಳೂರು: ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ನಡೆಯಲಿದೆ. ಈ ಬಗ್ಗೆ ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು​ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಇದೀಗ ನಟ, ಪ್ರಜಾಕೀಯ ಪಕ್ಷ ಸಂಸ್ಥಾಪಕ ಉಪೇಂದ್ರ ಟ್ವಿಟರ್​ನಲ್ಲಿ ಪ್ರಶ್ನೆಯೊಂದನ್ನು ಎತ್ತಿದ್ದಾರೆ. ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಶನಿವಾರದಂದು ಫಲಿತಾಂಶ ಪ್ರಕಟವಾಗುತ್ತಿದೆ. ಮತ ಎಣಿಕೆಗೆ ಎರಡು ದಿನ ಬೇಕೆ? ಬಲ್ಲವರು ತಿಳಿಸುತ್ತೀರಾ? ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದ ಮತದಾನ ಮತ್ತುಮೇ 13, ಶನಿವಾರ ಫಲಿತಾಂಶ ಪ್ರಕಟ.ಮತ ಎಣಿಕೆಗೆ ಎರಡು ದಿನ ಬೇಕೆ ?!ಏಕೆಂದು ಬಲ್ಲವರು ತಿಳಿಸುತ್ತೀರಾ ?#ElectionCommission#Election2023#KarnatakaElection2023— Upendra (@nimmaupendra)March 29, 2023
ಕರ್ನಾಟಕದಲ್ಲಿ ಮೇ 10, ಬುಧವಾರದಂದು ಒಂದೇ ಹಂತದ ಮತದಾನ ಮತ್ತುಮೇ 13, ಶನಿವಾರ ಫಲಿತಾಂಶ ಪ್ರಕಟ.ಮತ ಎಣಿಕೆಗೆ ಎರಡು ದಿನ ಬೇಕೆ ?!ಏಕೆಂದು ಬಲ್ಲವರು ತಿಳಿಸುತ್ತೀರಾ ?#ElectionCommission#Election2023#KarnatakaElection2023
ಸದ್ಯ ಉಪೇಂದ್ರ ಅವರು ಟ್ವಿಟರ್​ನಲ್ಲಿ ವ್ಯಕ್ತಪಡಿಸಿರುವ ಗೊಂದಲದ ಬಗ್ಗೆ ಅನೇಕರು ಕಮೆಂಟ್ ಮೂಲಕ ಉತ್ತರಿಸುತ್ತಿದ್ದಾರೆ. ಉಪೇಂದ್ರ ಅವರೇ, ಚುನಾವಣೆ ಆದ ದಿನವೇ ಮತ ಎಣಿಕೆ ಮಾಡಲು ಹೇಗೆ ಸಾಧ್ಯ? ಹಳ್ಳಿ ಹಳ್ಳಿಗಳಿಂದ ಮತ ಪೆಟ್ಟಿಗೆ ಸುರಕ್ಷಿತವಾಗಿ ಕೊಂಡೊಯ್ದು, ನೋಂದಾಯಿತ ಮತ ಎಣಿಕೆ ಕೇಂದ್ರಕ್ಕೆ ತಲುಪಬೇಕು. ಇದಕ್ಕೆ ಸಮಯ ಬೇಕಲ್ಲವೇ? ಮತ ಎಣಿಕೆ ಶುರುವಾಗುವುದು 13ನೇ ತಾರೀಖಿನಂದು. 11,12ನೇ ತಾರೀಖಿನಂದು ಅಲ್ಲ ಎಂದು ಬಳಕೆದಾರರೊಬ್ಬರು ಕಮೆಂಟ್ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 7 =
Remember me
