ಬೆಂಗಳೂರು:ಶೂಟಿಂಗ್ ವೇಳೆ ಉಂಟಾದ ಡಸ್ಟ್​ ಅಲರ್ಜಿಯಿಂದಾಗಿ ನಟ ಉಪೇಂದ್ರ ಅವರಲ್ಲಿ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಹೀಗಾಗಿ ಉಪೇಂದ್ರ ನೆಲಮಂಗಲದ ರಾಮಯ್ಯ ಹರ್ಷ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು, ಡಿಸ್ಚಾರ್ಜ್​ ಆಗಿ ಹೊರಬಂದಿದ್ದಾರೆ.
ಉಪೇಂದ್ರ ಮಧ್ಯಾಹ್ನ 1.30ರ ಸುಮಾರಿಗೆ ಆಸ್ಪತ್ರೆಗೆ ಬಂದಿದ್ದರು. ಶೂಟಿಂಗ್​ನಲ್ಲಿದ್ದಾಗ ಡಸ್ಟ್​ ಅಲರ್ಜಿ ಮತ್ತು ಸ್ಮೋಕ್​ ಬಳಕೆ ಮಾಡಿದ್ದರಿಂದ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ. ಹೀಗಾಗಿ ಕೂಡಲೇ ಆಸ್ಪತ್ರೆಗೆ ಬಂದಿದ್ದಾರೆ. ಈ ವೇಳೆ ಅವರ ದೇಹದಲ್ಲಿ ಉಸಿರಾಟದ ಪ್ರಮಾಣ ಕಡಿಮೆಯಾಗಿತ್ತು. ಕೂಡಲೇ ವೈದ್ಯರು ಪರೀಕ್ಷಿಸಿ ಅಗತ್ಯ ಚಿಕಿತ್ಸೆ ನೀಡಿದ್ದಾರೆ. ಉಪೇಂದ್ರ ಅರ್ಧ ಗಂಟೆ ಅವಧಿಯಲ್ಲಿ ಚೇತರಿಸಿಕೊಂಡು ಮತ್ತೆ ಹಿಂತಿರುಗಿದ್ದಾರೆ. ಗಂಭೀರ ಸಮಸ್ಯೆ ಏನೂ ಇಲ್ಲವಾಗಿದ್ದು, ಯಾರೂ ಭಯ ಪಡಬೇಕಾದ ಅಗತ್ಯ ಇಲ್ಲ ಎಂದು ರಾಮಯ್ಯ ಹರ್ಷ ಆಸ್ಪತ್ರೆಯ ವೈದ್ಯ ಡಾ.ಯೂಸಫ್ ಮಾಹಿತಿ ನೀಡಿದ್ದಾರೆ.
ಆಸ್ಪತ್ರೆಯಿಂದ ಹೊರ ಬರುತ್ತಿದ್ದಂತೆ ಫೇಸ್​ಬುಕ್ ಮೂಲಕ ಲೈವ್ ಬಂದು, ನಾನು ಆರೋಗ್ಯವಾಗಿದ್ದೇನೆ. ಯಾರೂ ಭಯಪಡಬೇಡಿ. ಮತ್ತೆ ಶೂಟಿಂಗ್​ಗೆ ತೆರಳುತ್ತಿದ್ದೇನೆ ಎಂದು ಹೇಳಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:5 × five =
Remember me
