ಬೆಂಗಳೂರು:ಟಾಟಾ ಟೆಕ್ನಾಲಜೀಸ್ ಮತ್ತು ಇತರ 20 ಖಾಸಗಿ ಉದ್ಯಮಗಳ ಸಹಭಾಗಿತ್ವದಲ್ಲಿ ರಾಜ್ಯದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ತಂತ್ರಜ್ಞಾನ ಕೇಂದ್ರಗಳನ್ನಾಗಿ ಪರಿವರ್ತಿಸುವ ಕರಾರು ಒಪ್ಪಂದಕ್ಕೆ ಶುಕ್ರವಾರ ಸಹಿ ಹಾಕಲಾಯಿತು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಕ್ಷಮ ಮಹತ್ವಪೂರ್ಣ ಒಡಂಬಡಿಕೆಯಾಯಿತು. ನಂತರ ಸುದ್ದಿಗಾರರ ಜತೆ ಮಾತನಾಡಿದ ಬಿಎಸ್​ವೈ, ದೇಶದಲ್ಲಿ ಮೊದಲ ಬಾರಿಗೆ ರಾಜ್ಯ ಸರ್ಕಾರ ಮತ್ತು ಉದ್ಯಮಗಳು ಪರಸ್ಪರ ಕೈಜೋಡಿಸಿ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದು, ಇದೊಂದು ದೊಡ್ಡ ಘೋಷಣೆಯಾಗಿದೆ ಎಂದರು.
ಕೈಗಾರಿಕೆಗಳಿಗೆ ಬೇಕಾದ ನುರಿತ ಮಾನವ ಸಂಪನ್ಮೂಲ ಸೃಜನೆಯಲ್ಲಿ ಗಮನಾರ್ಹ ಹೆಜ್ಜೆಯಾಗಿದ್ದು, ರಾಜ್ಯದ ಯುವಜನತೆಗೆ ಉತ್ಕೃ್ಟ ಹಾಗೂ ಬೇಡಿಕೆಗೆ ತಕ್ಕಂತೆ ಕೌಶಲ್ಯಾಭಿವೃದ್ಧಿ ದೊರೆಯಲಿದೆ. ಈ ಉಪ ಕ್ರಮವು ಉದ್ಯಮ, ಬಂಡವಾಳ ಹೂಡಿಕೆ ಸ್ನೇಹಿ ರಾಜ್ಯವೆಂಬ ಹೆಗ್ಗಳಿಕೆ ನಿದರ್ಶನವಾಗಲಿದೆ ಎಂದು ಪ್ರಶಂಸಿಸಿದರು.
ಬಂಡವಾಳ ಹೂಡಿಕೆ ಮತ್ತು ಉದ್ಯಮ ನೆಲೆಗೊಳಿಸುವುದಕ್ಕೆ ಬೇಕಾದ ವಿನಾಯಿತಿ, ಕಾಯ್ದೆಗಳಲ್ಲಿ ಸುಧಾರಣೆಗಳನ್ನು ತರಲಾಗಿದೆ. ಇದೀಗ ಐಟಿಐಗಳಿಗೆ ಅತ್ಯಾಧುನಿಕತೆ ಸ್ಪರ್ಶ ದೊರೆತು, ತರಬೇತಿ ಪಡೆಯಲಿರುವ ವಿದ್ಯಾರ್ಥಿಗಳು ಕೌಶಲ ಸಾಧಿಸಿ, ಕೈಗಾರಿಕೆಗಳ ಬೇಡಿಕೆಗಳನ್ನು ಸರಿದೂಗಿಸುವ ಸಾಮರ್ಥ್ಯ ಹೊಂದಲಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪ ಆಶಾಭಾವನೆ ವ್ಯಕ್ತಪಡಿಸಿದರು.
ಮುಖ್ಯಾಂಶಗಳು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − one =
Remember me
