ಬೆಂಗಳೂರು:ವಿಧಾನ ಪರಿಷತ್ತಿನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರಗಳಿಗೆ ಶಾಂತಿಯುತ ಮತದಾನ ನಡೆದಿದ್ದು, ಶೇ 79.91 ಮತದಾನವಾಗಿದೆ.
ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಶೇ. 69.51, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಶೇ.65.86, ನೈರುತ್ಯ ಪದವೀಧರರ ಕ್ಷೇತ್ರ ಶೇ. 78.19, ಆಗ್ನೇಯ ಶಿಕ್ಷಕರ ಕ್ಷೇತ್ರ ಶೇ. 95.27, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ. 82.56, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಶೇ. 88.07 ಮತದಾನವಾಗಿದೆ.ಈ ಚುನಾವಣೆಯಲ್ಲಿ 78 ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಮೂರು ಪದವೀಧರರ ಕ್ಷೇತ್ರದಲ್ಲಿ 3,63,573 ಹಾಗೂ ಮೂರು ಶಿಕ್ಷಕರ ಕ್ಷೇತ್ರದಲ್ಲಿ 70,260 ಮತದಾರರು ಸೇರಿ ಒಟ್ಟು 4,33,833 ಮತದಾರರು ಮತದಾನದ ಹಕ್ಕು ಹೊಂದಿದ್ದರು.
ಮತದಾನಕ್ಕೆ ಒಟ್ಟು ಪದವೀಧರರ ಕ್ಷೇತ್ರ ವ್ಯಾಪ್ತಿಯಲ್ಲಿ 461 ಮತ್ತು ಶಿಕ್ಷಕರ ಕ್ಷೇತ್ರ ವ್ಯಾಪ್ತಿಯಲ್ಲಿ 170 ಮತಗಟ್ಟೆ ಸ್ಥಾಪಿಸಲಾಗಿತ್ತು. ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 19, ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ 15, ನೈರುತ್ಯ ಪದವೀಧರರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳಿದ್ದರೆ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 15, ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ 8, ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು ಕಣದಲ್ಲಿದ್ದರು. ಜೂ.6 ರಂದು ಮತ ಎಣಿಕೆ ನಡೆಯಲಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × two =
Remember me
