ಬೆಂಗಳೂರು: ಚಡಚಣ, ಹುಣಸಗಿ ಪಟ್ಟಣ ಪಂಚಾಯಿತಿ, ಸೋಮೇಶ್ವರ, ವಾಡಿ ಪುರಸಭೆ ಸೇರಿದಂತೆರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಡಿ.27 ರಂದು ಮತದಾನಕ್ಕಾಗಿ ಸರ್ಕಾರಿ ಕಚೇರಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಹಾಗೂ ಉಪ ಉಪನಾವಣೆ ನಡೆಯುವ ಆಯಾನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವ್ಯಾಪ್ತಿಯಲ್ಲಿರುವ ಎಲ್ಲ ರಾಜ್ಯ ಸರ್ಕಾರಿ ಕಚೇರಿ, ಶಾಲೆ,ಕಾಲೇಜುಗಳು(ಅನುದಾನಿತ ಶಿಕ್ಷಣ ಸಂಸ್ಥೆ ಒಳಗೊಂಡಂತೆ) ಮತ್ತು ಸರ್ಕಾರಿ ಸ್ವಾಮ್ಯದಸಂಸ್ಥೆಗಳಿಗೆ ಡಿ.27 ರಂದು ಸಾರ್ವತ್ರಿಕ ರಜೆ ಘೋಷಿಸಿದೆ.
ಈ ಚುನಾವಣೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ಕೂಡ ಸರ್ಕಾರ ಆದೇಶಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 13 =
Remember me
