ಮೈಸೂರು:ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಮಾಡಿದ ಖ್ಯಾತ ಶಿಲ್ಪಿ ಅರುಣ್​ ಯೋಗಿರಾಜ್​ಗೆ ಅಮೆರಿಕಾ ವೀಸಾ ನಿರಾಕರಿಸಿದೆ. ಅಕ್ಕ ಸಮ್ಮೇಳನದಲ್ಲಿ ಭಾಗಿಯಾಗುವ ಸಲುವಾಗಿ ಅವರು ವೀಸಾಗೆ ಅರ್ಜಿ ಸಲ್ಲಿಸಿದ್ದರು.
ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು 20 ದಿನಗಳ ಪ್ರವಾಸಕ್ಕೆ ಅರುಣ್ ಯೋಗಿರಾಜ್ ಅಮೆರಿಕಾಗೆ ಹೋಗಬೇಕಿತ್ತು. ಅದಕ್ಕಾಗಿ ಅವರು ಜೂನ್​ನಲ್ಲಿ ವೀಸಾಗೆ ಅರ್ಜಿಯನ್ನು ಸಲ್ಲಿಸಿದ್ದರು. ಆದರೆ ನಿಬಂಧನೆಗಳನ್ನು ಪೂರ್ತಿಗೊಳಿಸದ ಹಿನ್ನೆಲೆಯಲ್ಲಿ ಇದೀಗ ವೀಸಾ ನಿರಾಕರಣೆ ಮಾಡಲಾಗಿದೆ.
ಅಮೆರಿಕದ ಕನ್ನಡ ಕೂಟಗಳ ಸಂಘ, ವಿಶ್ವ ಕನ್ನಡ ಸಮ್ಮೇಳನ-2024 ಕಾರ್ಯಕ್ರಮವನ್ನು ವರ್ಜೀನಿಯಾದ ರಿಚ್ಮಂಡ್​ನಲ್ಲಿ ಆಗಸ್ಟ್​ 30ರಿಂದ ಸೆಪ್ಟೆಂಬರ್​ 01ರವರೆಗೆ ಆಯೋಜಿಸಿದೆ . ಈ ಕಾರ್ಯಕ್ರಮದಲ್ಲಿ ಶಿಲ್ಪಿ ಅರುಣ್​ ಯೋಗಿರಾಜ್​ ಹಾಗೂ ಅವರ ಕುಟುಂಬದವರನ್ನು ಸಂಘಟಕರು ಆಹ್ವಾನಿಸಿದ್ದರು. ಈ ಸಂಬಂಧ ಅವರು ವೀಸಾ ಪಡೆಯಲು ಅರ್ಜಿ ಹಾಕಿದ್ದರು. ಆದರೆ, ವೀಸಾ ಅರ್ಜಿಯನ್ನು ತಿರಸ್ಕರಿಸಿರುವ ಅಮೆರಿಕ ರಾಯಭಾರ ಕಚೇರಿ ಇದುವರೆಗೆ ಯಾವುದೇ ಕಾರಣವನ್ನು ನೀಡಿಲ್ಲ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅರುಣ್​ ಯೋಗಿರಾಜ್​ ಅವರ ಪತ್ನಿ ವಿಜೇತಾ ಈಗಾಗಲೇ ಅಮೆರಿಕಾಗೆ ತೆರಳಿದ್ದು, ಇದೀಗ ಅರುಣ್​ ಯೋಗಿರಾಜ್​ ಅವರ ವೀಸಾ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ.
ಇದನ್ನೂ ಓದಿ:ರೇಣುಕಸ್ವಾಮಿ ಹತ್ಯೆ ಕೇಸ್​; ದರ್ಶನ್​ ಆ್ಯಂಡ್​ ಗ್ಯಾಂಗ್​ನ ನ್ಯಾಯಾಂಗ ಬಂಧನ ವಿಸ್ತರಣೆ
ಈ ಕುರಿತು ಮಾತನಾಡಿರುವ ಶಿಲ್ಪಿ ಅರುಣ್​ ಯೋಗಿರಾಜ್​, ವೀಸಾವನ್ನು ಯುಎಸ್ ತಿರಸ್ಕರಿಸಿರುವುದು ನಿಜ. ಎಲ್ಲಾ ದಾಖಲೆಗಳನ್ನು ನೀಡಲಾಗಿತ್ತು. ಆದರೆ, ಯಾವ ಕಾರಣಕ್ಕೆ ವೀಸಾ ನೀಡುವುದಿಲ್ಲ ಎಂಬುದು ನನಗೆ ತಿಳಿಸಿಲ್ಲ ಎಂದು ಹೇಳಿದ್ದಾರೆ.
ಸಂಸದ ಯದುವೀರ್​ ಮಾತನಾಡಿ, ಈಗಾಗಲೇ ಅರುಣ್ ಜೊತೆ ಮಾತನಾಡಿದ್ದೇನೆ. ಯಾವ ಕಾರಣಕ್ಕೆ ವೀಸಾ ರಿಜೆಕ್ಟ್ ಆಗಿದೆ ಎಂಬುದು ಗೊತ್ತಿಲ್ಲ. ಅರುಣ್ ಯೋಗಿರಾಜ್ ನಮ್ಮ ದೇಶದ ಆಸ್ತಿ. ಶಂಕರಾಚಾರ್ಯ, ರಾಮಲಲ್ಲ ಮೂರ್ತಿ ಕೆತ್ತನೆ ಮಾಡಿ ಇಡೀ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹಿಂದೂ ಅನ್ನೋ ಕಾರಣಕ್ಕೆ ವೀಸಾ ರೆಜೆಕ್ಟ್ ಆಗಿರುವ ಬಗ್ಗೆ ಮಾಹಿತಿ ಇಲ್ಲ. ಈ ಬಗ್ಗೆ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten + 1 =
Remember me
