ಮಂಗಳೂರು:ಕೋವಿಡ್ ಸೋಂಕಿನಿಂದ ಮೃತಪಟ್ಟವನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡ ಶಾಸಕ ಯು.ಟಿ. ಖಾದರ್ ಪಿಪಿಇ ಕಿಟ್ ಧರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ.
ಕರೊನಾ ಸೋಂಕಿನಿಂದ ಬಳಲುತ್ತಿದ್ದ 70 ವರ್ಷದ ವದ್ಧರೊಬ್ಬರು ನಿನ್ನೆ(ಮಂಗಳವಾರ) ಮೃತಪಟ್ಟಿದ್ದರು. ಅಂದು ಸಂಜೆ ಮಂಗಳೂರಿನ ಬೋಳಾರ ಮಸೀದಿಯ ದಫನ ಭೂಮಿಯಲ್ಲಿ ಅಂತ್ಯಸಂಸ್ಕಾರ ಕಾರ್ಯ ನೆರವೇರಿಸಲು ಆರೋಗ್ಯ ಇಲಾಖೆ ಸಿಬ್ಬಂದಿ ಬಂದಿದ್ದರು. ಈ ವೇಳೆ ಪಿಪಿಇ ಕಿಟ್ ಧರಿಸದೆ ಅಲ್ಲಿಗೆ ಬಂದ ಖಾದರ್, ಸ್ವತಃ ಮಸೀದಿ ಭೂಮಿಯಲ್ಲಿ ಗುಂಡಿ ತೆಗೆಯುವ ಕಾರ್ಯದಲ್ಲಿ ಭಾಗಿಯಾದರು.ಇದನ್ನೂ ಓದಿರಿಜೈಲಿಂದ ಬಿಡುಗಡೆಯಾದ ರೌಡಿ ಕೊರಂಗು ಕೃಷ್ಣನನ್ನು ಕರೆದೊಯ್ಯಲು ಬಂದದ್ದು 70 ಕಾರುಗಳು!
ಕರೊನಾ ಸೋಂಕಿತನ ಅಂತ್ಯಸಂಸ್ಕಾರ ಕಾರ್ಯದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಜತೆ ಪಾಲ್ಗೊಂಡ ಶಾಸಕ ಖಾದರ್, ಮೃತದೇಹವನ್ನು ಗುಂಡಿಯಲ್ಲಿಟ್ಟು ಮಣ್ಣು ಮುಚ್ಚುವ ಕೆಲಸವನ್ನೂ ಮಾಡಿದರು. ಆರೋಗ್ಯ ಇಲಾಖೆ ಸಿಬ್ಬಂದಿ ಪಿಪಿಇ ಕಿಟ್ ಧರಿಸಿದ್ದರು. ಆದರೆ, ಶಾಸಕರು ಮಾತ್ರ ಇದ್ಯಾವುದರ ಪರಿವೇ ಇಲ್ಲದಂತೆ ವರ್ತಿಸಿದ್ದು ಮತ್ತಷ್ಟು ಆತಂಕ ಮೂಡಿಸಿದೆ.
ಇದನ್ನೂ ನೋಡಿ
https://www.facebook.com/VVani4U/videos/296610358191236/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
