ಬಸವನ ಬಾಗೇವಾಡಿ:ಬಡವರಿಗೆ ಗುಣಮಟ್ಟದ ಶಿಕ್ಷಣ ಮರೀಚಿಕೆಯಾಗಿರುವ ಈ ಕಾಲದಲ್ಲಿ ಎಲ್ಲ ಜಾತಿ ಜನಾಂಗದ ಬಡ ಮಕ್ಕಳಿಗಾಗಿ ಉಚಿತ ಊಟ, ವಸತಿ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಉತ್ನಾಳ ಶ್ರೀ ಮಹಾಲಕ್ಷ್ಮಿದೇವಿ ಪಬ್ಲಿಕ್ ಸ್ಕೂಲ್ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ.
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಸುಕ್ಷೇತ್ರ ಉತ್ನಾಳ ಹಿರೇಮಠವು ನಡೆಸುತ್ತಿರುವ ಶ್ರೀಮಹಾಲಕ್ಷ್ಮಿದೇವಿ ಪಬ್ಲಿಕ್ ಸ್ಕೂಲ್‌ನ ವಸತಿ ಸಹಿತ ಮತ್ತು ವಸತಿ ರಹಿತ ತರಗತಿಗೆ ಈಗಾಗಲೇ ಪ್ರವೇಶಾತಿ ಆರಂಭವಾಗಿದ್ದು, ಎಲ್ಲ ಜಾತಿ-ಜನಾಂಗಗಳ ಬಡ ವಿದ್ಯಾರ್ಥಿಗಳಿಗೆ 1ನೇ ತರಗತಿಯಿಂದ 8ನೇ ತರಗತಿವರೆಗೆ ಪ್ರವೇಶಾತಿ ನೀಡಲಾಗುತ್ತದೆ. ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಮತ್ತು ಶಿಕ್ಷಣವನ್ನು ನೀಡಲಾಗುವುದು ಎಂದು ಶ್ರೀಶಿವಪುತ್ರಯ್ಯ ಸ್ವಾಮಿ ಹಿರೇಮಠ ಅವರು ತಿಳಿಸಿದ್ದಾರೆ.
ವಸತಿ ಸಹಿತ ಶಾಲೆಯಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ನುರಿತ ಶಿಕ್ಷಕರು ಉಚಿತವಾಗಿ ಟ್ಯೂಷನ್ ತರಗತಿಗಳನ್ನು ನಡೆಸಲಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವುದಾಗಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸಂಗಮೇಶ ಹಿರೇಮಠ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬೇಕಾದ ವಿಳಾಸ ಮತ್ತು ದೂರವಾಣಿ ವಿವರ : ಶ್ರೀಮಹಾಲಕ್ಷ್ಮಿ ಉಚಿತ ವಸತಿ ಶಾಲೆ, ಸುಕ್ಷೇತ್ರ ಉತ್ನಾಳ ಹಿರೇಮಠ, ಬಸವನ ಬಾಗೇವಾಡಿ ತಾ. ವಿಜಯಪುರ ಜಿ. ದೂ: 9008350700, 9972691234.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × one =
Remember me
