ಉತ್ತರಕನ್ನಡ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಗುರುವಾರ ಸಂಜೆ ನಡೆದಿದೆ.
ಕಿರವತ್ತಿ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಹುಬ್ಬಳ್ಳಿಯಿಂದ ಅಂಕೋಲಾ ಕಡೆಗೆ ಬರುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿದ್ದು, ಗುರುತಿನ್ನೂ ಪತ್ತೆಯಾಗಿಲ್ಲ. ಮೃತರು ಇಬ್ಬರು ಪುರುಷರು ಹಾಗೂ ಇಬ್ಬರು ಮಹಿಳೆಯರು ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಫೇಸ್​​ಬುಕ್​ನಲ್ಲಿ ಪರಿಚಯವಾದ ಯುವತಿಯಿಂದ ಪೇಚಿಗೆ ಸಿಲುಕಿದ ಪಾದ್ರಿ; ಮೂವರ ವಿರುದ್ಧ ಎಫ್​ಐಆರ್​
ಕಾರು ದೆಹಲಿ ನೋಂದಣಿಯನ್ನು ಹೊಂದಿದ್ದು, ಘಟನಾ ಸ್ಥಳಕ್ಕೆ ಧಾವಿಸಿದ ಯಲ್ಲಾಪುರ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಮೃತರ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.(ದಿಗ್ವಿಜಯ ನ್ಯೂಸ್​)
ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆರೋಗ್ಯ ತೀವ್ರ ಚಿಂತಾಜನಕ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:9 + 7 =
Remember me
