ಉತ್ತರಕನ್ನಡ:ಇತ್ತೀಚಿನ ದಿನಗಳಲ್ಲಿ ಸಾಲದ ಆ್ಯಪ್​ಗಳು​ ಮತ್ತು ರಮ್ಮಿಯಂತಹ ಆನ್​ಲೈನ್​ ಜೂಜಾಟಗಳು ಬಡ ಮತ್ತು ಮಧ್ಯಮ ಕುಟುಂಬಗಳ ಕತ್ತು ಹಿಸುಕುತ್ತಿವೆ. ಆನ್​ಲೈನ್​ನಲ್ಲಿ ನಡೆಯುವ ಈ ವಂಚನೆಯ ಚಕ್ರವ್ಯೂಹಕ್ಕೆ ಸಿಲುಕಿ ಸಾಕಷ್ಟು ಮಂದಿ ಬಲಿಯಾಗುತ್ತಿದ್ದಾರೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಕಡಿವಾಣ ಹಾಕದಿದ್ದರೆ, ಇನ್ನುಷ್ಟು ಅಮಾಯಕ ಜೀವಗಳು ಬಲಿಯಾಗುತ್ತವೆ.
ಇದೀಗ ಶಿರಸಿ ತಾಲೂಕಿನ ಕುಳವೆ ಗ್ರಾಮದ ಬಳಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆನ್​ಲೈನ್ ಗೇಮ್‌ನಲ್ಲಿ ಹಣ ಕಳೆದುಕೊಂಡು ಮನನೊಂದಿದ್ದ ಯುವಕ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾನೆ.
ಇದನ್ನೂ ಓದಿ:ಪತ್ರಕರ್ತರಿಗೆ ಗುರುತಿನಚೀಟಿ ವಿತರಣೆ- ಮೂಲಸೌಕರ್ಯ ಒದಗಿಸಲು ಯತ್ನ
ವಿಜೇತ್ ಶಾಂತಾರಾಮ ಹೆಗಡೆ (37) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬೆಂಗಳೂರಿಗೆ ಹೋಗಿ ಬರುತ್ತೇನೆಂದು ಹೇಳಿ ನಿನ್ನೆ ಮನೆಯಿಂದ ಹೊರಟಿದ್ದ. ಆದರೆ, ಡೆತ್​ನೋಟ್ ಬರೆದು, ಕುಳವೆ ಗ್ರಾಮದ ಬಳಿ ನೇಣು ಬಿಗಿದುಕೊಂಡು ಸಾವಿನ ಹಾದಿ ಹಿಡಿದಿದ್ದಾನೆ.
ಸುಮಾರು 65 ಲಕ್ಷ ರೂಪಾಯಿಗೂ ಹೆಚ್ಚಿನ ಹಣವನ್ನು ವಿಜಯ್​, ಆನ್‌ಲೈನ್​ ಗೇಮ್‌ನಲ್ಲಿ ಕಳೆದುಕೊಂಡಿದ್ದ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಸ್ಮಶಾನಕ್ಕೆ ದಾರಿ ನಿರಾಕರಣೆ; ನಡುರಸ್ತೆಯಲ್ಲಿ ಶವವಿಟ್ಟು ಪ್ರತಿಭಟಿಸಿದ ದಲಿತರು

ಲಿವ್ ಇನ್​ಗೂ ನೋಂದಣಿ?: ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆ ಕರಡು ಸಿದ್ಧ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + six =
Remember me
