ಬೆಂಗಳೂರು:ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಕಡ್ಡಾಯವಾಗಿ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (UUCMS) ಜಾರಿಗೊಳಿಸುವಂತೆ ಉನ್ನತ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.
UUCMS ತಂತ್ರಾಂಶದಲ್ಲಿ ವಿವಿಧ 10 ಮಾಡ್ಯೂಲ್‌ಗಳಿದ್ದು, ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿ ಅಡಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪ್ರವೇಶ, ಶೈಕ್ಷಣಿಕ ಮತ್ತು ಪರೀಕ್ಷಾ ಮಾಡ್ಯೂಲ್‌ಗಳನ್ನು ವಿಶ್ವವಿದ್ಯಾಲಯದಲ್ಲಿ 2020-21ನೇ ಸಾಲಿನಿಂದಲೇ ಆರಂಭಿಸಲಾಗಿದೆ. 2022-23ನೇ ಸಾಲಿನಲ್ಲಿಯೂ ಯಶಸ್ವಿಯಾಗಿ ಅನುಷ್ಠಾನ ಮಾಡಲಾಗಿದೆ.
ಇದನ್ನೂ ಓದಿ:ಟ್ರೋಲ್​ ಮಾಡುವವರಿಗೆ ಖಡಕ್​ ರಿಪ್ಲೈ ಕೊಟ್ಟ ಸಲ್ಮಾನ್ ಖಾನ್​​
ಇದೀಗ ಹೊಸದಾಗಿ ಆರ್ಥಿಕ ಯೋಜನೆ ಮತ್ತು ನಿರ್ವಹಣೆ, ಮಾನ್ಯತೆ, ಮಾನವ ಅಭಿವೃದ್ಧಿ ಮತ್ತು ಸ್ಟೂಡೆಂಟ್ ಸಪೋರ್ಟ್ ಸಿಸ್ಟಂ ಮಾಡ್ಯೂಲ್‌ಗಳನ್ನು ವಿಶ್ವವಿದ್ಯಾಲಯ, ಕಾಲೇಜು ಮತ್ತು ವಿದ್ಯಾರ್ಥಿಗಳ ಬಳಕೆಗೆ ಲೋಕಾರ್ಪಣೆ ಮಾಡಲಾಗಿದೆ. ಹೊಸ ಮಾಡ್ಯೂಲ್‌ಗಳನ್ನು ಕಡ್ಡಾಯವಾಗಿ ಬಳಸಬೇಕೆಂದು ನಿರ್ದೇಶಿಸಲಾಗಿದೆ. ಈ ಆದೇಶ ಉಲ್ಲಂಸಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಯು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂಬ ಎಚ್ಚರಿಕೆ ನೀಡಿದೆ.
ಉನ್ನತ ಶಿಕ್ಷಣ ಇಲಾಖೆ ಅಡಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿ ಬರುವ ಸಂಯೋಜಿತ ಕಾಲೇಜುಗಳ ಪ್ರಕ್ರಿಯೆಗಳಾದ ಹೊಸ ಕಾಲೇಜುಗಳ ಮಾನ್ಯತೆ/ನವೀಕರಣ, ವಿಷಯಗಳ ಬದಲಾವಣೆ, ಇನ್‌ಟೇಕ್ (ಸೀಟು) ಹೆಚ್ಚಳ, ಹೆಸರು ಬದಲಾವಣೆ, ಸ್ಥಳ ಬದಲಾವಣೆ, ಕಾಲೇಜುಗಳನ್ನು ಮುಚ್ಚುವುದು, ಸ್ಥಳೀಯ ವಿಚಾರಣಾ ಸಮಿತಿ (LIC) ನೇಮಕ, ಆಡಳಿತ ವರ್ಗಾವಣೆ ಸೇರಿ ಎಲ್ಲ ಪ್ರಕ್ರಿಯೆಗಳನ್ನು ಆನ್‌ಲೈನ್ ಮೂಲಕವೇ ನಿರ್ವಹಿಸುವಂತೆ ಸೂಚಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
