ಬೆಂಗಳೂರು: ಕೆಪಿಸಿಸಿ ಭಾನುವಾರ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ವಿ.ಸತ್ಯ ಅವರನ್ನು ನೇಮಕ ಮಾಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಕೆ ವಿ ಗೌತಮ್ ವಿ. ಸತ್ಯ ಅವರಿಗೆ ನೇಮಕಾತಿ ಆದೇಶ ಪತ್ರ ನೀಡಿ ಅಭಿನಂದಿಸಿದರು.
ವಿ.ಸತ್ಯ ನೇಮಕಾತಿ ಪತ್ರ ಸ್ವಿಕರಿಸಿ ಮಾತನಾಡಿ ಕಾಂಗ್ರೆಸ್ ಪಕ್ಷವು ಸದಾ ಬಡವರ ಪರ ಹೋರಾಟ ಮಾಡುವ ಪಕ್ಷವಾಗಿದೆ. ಹಲವು ವರ್ಷಗಳಿಂದ ಪಕ್ಷದಲ್ಲಿ ಸಕ್ರಿಯನಾಗಿದ್ದೇನೆ. ಸಚಿವ ದಿನೇಶ್ ಗುಂಡೂರಾವ್ ಅವರ ಮಾರ್ಗದರ್ಶನದಲ್ಲಿ ಜನಸೇವೆ ಮಾಡುತ್ತಿದ್ದೇನೆ ಎಂದು ಹೇಳಿದರು.
ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳನ್ನು ಕ್ಷೇತ್ರದ ಜನರಿಗೆ ಸಮರ್ಪಕವಾಗಿ ತಲುಪಿಸಲಾಗಿದೆ. ಅಲ್ಲದೆ, ಅನ್ನಭಾಗ್ಯ ಯೋಜನೆ ,ಶಕ್ತಿ ಯೋಜನೆ, ಮನೆಯ ಯಾಜಮಾನಿಗೆ 2000ಸಾವಿರ ಸಹಾಯಧನ, 200ಯೂನಿಟ್ ಉಚಿತ ವಿದ್ಯುತ್, ಹಾಗೂ ಯುವ ನಿಧಿ ಯೋಜನೆಗಳಿಗೆ ರಾಜ್ಯಾದ್ಯಂತ ಉತ್ತಮ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಈ ಮೂಲಕ ಕಾಂಗ್ರೆಸ್ ಸರ್ಕಾರ ಜನಪರ ಎಂಬುದು ಸಾಬಿತಾಗಿದೆ ಎಂದರು.
ಕಾಂಗ್ರೆಸ್ ಪಕ್ಷನನ್ನನ್ನು ಆಯ್ಕೆ ಮಾಡಿ ದೊಡ್ಡ ಜವಾಬ್ದಾರಿ ನೀಡಿದೆ. ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಲ್ಲ ವಾರ್ಡ್‌ಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲು ಕಾರ್ಯಯೋಜನೆ ರೂಪಿಸಿ ಸಂಘಟನೆ ಮಾಡುತ್ತೇನೆ ಎಂದು ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 5 =
Remember me
