ಯಾದಗಿರಿ:ವಡಿಗೇರಾ ತಾಲೂಕಿನ ಉಳ್ಳೆಸೂಗುರು ಗ್ರಾಮ ಪಂಚಾಯಿತಿ ಕಚೇರಿ ಬಳಿ ಶುಕ್ರವಾರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, 50ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದಾರೆ. ಕಾರುಗಳು ಸೇರಿದಂತೆ 20ಕ್ಕೂ ಹೆಚ್ಚು ವಾಹನ ಜಖಂಗೊಂಡಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಶುಕ್ರವಾರ ಉಳ್ಳೆಸೂಗುರು ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಶುರುವಾಗುತ್ತಿದ್ದಂತೆ ಹೊರಗಡೆ ಜಮಾಯಿಸಿದ್ದ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗುಸುಗುಸು ಆರಂಭಗೊಂಡಿತು. ಇತ್ತ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗುತ್ತಿದ್ದಂತೆ ಕಾರ್ಯಕರ್ತರು ಘೋಷಣೆ ಕೂಗಿದರು. ಇದರಿಂದ ಕೆರಳಿದ ಮತ್ತೊಂದು ಗುಂಪು ಕೈಗೆ ಸಿಕ್ಕ ವಸ್ತುಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿತು. ದೊಡ್ಡ ಗಾತ್ರದ ಕಲ್ಲು, ಕಟ್ಟಿಗೆಯಿಂದ ಸಿಕ್ಕ-ಸಿಕ್ಕವರ ಮೇಲೆ ಎರಗಿ ಥಳಿಸಿದ್ದರಿಂದ ಕ್ಷಣಾರ್ಧದಲ್ಲಿ ಇಡೀ ಗ್ರಾಮಕ್ಕೆ ಗ್ರಾಮವೇ ಉದ್ವಿಗ್ನ ಪರಿಸ್ಥಿತಿಗೆ ಸಿಲುಕಿತು.ಇದನ್ನೂ ಓದಿರಿಗ್ರಾಪಂ ಅಧ್ಯಕ್ಷೆ-ಉಪಾಧ್ಯಕ್ಷೆ ಹಣೆ ಬರಹ ಬರೆದ 8 ವರ್ಷದ ಬಾಲಕಿ!
ಘಟನೆಯಲ್ಲಿ ಐದಾರು ಕಾರುಗಳು, 10ಕ್ಕೂ ಹೆಚ್ಚು ಬೈಕ್​ಗಳು ಜಖಂಗೊಂಡಿವೆ. ಕಾಂಗ್ರೆಸ್ ಮುಖಂಡ ಬಸ್ಸುಗೌಡ ಬಿಳ್ಹಾರ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಡಿವೈಎಸ್ಪಿ ಸಂತೋಷ ಬನಹಟ್ಟಿ ನೇತೃತ್ವದ ತಂಡ ಬಂದೋಬಸ್ತ್ ಮಾಡಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದು,ಎರಡು ಗುಂಪಿನ ನಡುವೆ ಮಾರಾಮಾರಿ ನಡೆದು 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಲಾಟೆಯಲ್ಲಿ ಗಾಯಗೊಂಡು ಹಲವರು ರಕ್ತಸಿಕ್ತವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಐದಾರು ಕಾರುಗಳ ಗಾಜು ಪುಡಿಪುಡಿಯಾಗಿದ್ದು, ಅಪಾರ ಪ್ರಮಾಣದ ಹಾನಿ ಉಂಟಾಗಿದೆ.
ಉಳ್ಳೆಸೂಗುರು ಗ್ರಾಮದಲ್ಲಿ ಎರಡು ಗುಂಪಿನ ಮಧ್ಯೆ ಜಟಾಪಟಿ ನಡೆದಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಘಟನೆ ಕುರಿತು ತನಿಖೆ ನಡೆಸಲಾಗುವುದು ಎಂದು ಎಸ್ಪಿ ಋಷಿಕೇಶ ಭಗವಾನ್ ಸೋನವಾಣೆ ತಿಳಿಸಿದ್ದಾರೆ.
ಇನ್ನು ಘಟನೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಸಂಜೆ ಯಾದಗಿರಿ ಹೊಸ ಜಿಲ್ಲಾಸ್ಪತ್ರೆ ಎದುರು ದಿಢೀರ್ ಪ್ರತಿಭಟನೆ ನಡೆಸಿದರು. ಚುನಾವಣೆ ಇದೆ ಎಂದು ಗೊತ್ತಿದ್ದರೂ ಪಿಎಸ್ಐ ಸೂಕ್ತ ಭದ್ರತೆ ಒದಗಿಸದ್ದರಿಂದ ಗಲಾಟೆ ನಡೆದಿದೆ. ಪಿಎಸ್ಐ ಅಮಾನತು ಮಾಡಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಬಸ್ಸುಗೌಡ ಬಿಳ್ಹಾರ ನೇತೃತ್ವದಲ್ಲಿ ಕಾರ್ಯಕರ್ತರು ಒತ್ತಾಯಿಸಿದರು.
ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?

ಬೆಂಗ್ಳೂರಲ್ಲಿ ನಿವೃತ್ತ ಉಪ ತಹಸೀಲ್ದಾರ್ ಕೊಂದು ಬಿಡದಿಯಲ್ಲಿ ಸುಟ್ಟುಹಾಕಿದ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಶೃಂಗೇರಿಯಲ್ಲಿ ಬಾಲಕಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಅತ್ಯಾಚಾರ: ಸರ್ಕಲ್​ ಇನ್​ಸ್ಪೆಕ್ಟರ್​ ಅಮಾನತು

ಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ

ಗ್ರಾಪಂ ಅಧ್ಯಕ್ಷೆ-ಉಪಾಧ್ಯಕ್ಷೆ ಹಣೆ ಬರಹ ಬರೆದ 8 ವರ್ಷದ ಬಾಲಕಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 6 =
Remember me
