ವೈಕುಂಠ ಏಕಾದಶಿ ನಿಮಿತ್ತ ಸೋಮವಾರ ರಾಜ್ಯ- ಹೊರ ರಾಜ್ಯದ ವಿವಿಧ ದೇವಾಲಯಗಳಲ್ಲಿ ಭಕ್ತರು ಶ್ರೀಮನ್ನಾರಾಯಣನ ದರ್ಶನ ಪಡೆದು ಪುನೀತರಾದರು. ಎಲ್ಲೆಡೆ ವೈಕುಂಠಪತಿ ಶ್ರೀನಿವಾಸನ ಆರಾಧನೆ ವಿಜೃಂಭಣೆಯಿಂದ ನೆರವೇರಿತು. ದೇವಾಲಯಗಳ ಮುಂದೆ ಬೆಳಗಿನ ಜಾವದಿಂದಲೇ ಭಕ್ತರು ಸಾಲುಗಟ್ಟಿ ನಿಂತು, ವೈಕುಂಠ ದ್ವಾರ ಪ್ರವೇಶಿಸುವ ಮೂಲಕ ಭಗವಂತನ ಕೃಪೆಗೆ ಪಾತ್ರರಾದರು.
ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರು ವೈಕುಂಠ ಏಕಾದಶಿ ನಿಮಿತ್ತ ಸೋಮವಾರ ಬೆಂಗಳೂರಿನ ಇಸ್ಕಾನ್ ದೇಗುಲದಲ್ಲಿ ದೇವರ ದರ್ಶನ ಪಡೆದರು. ಪಂಢರಾಪುರದಲ್ಲಿ ಶ್ರೀ ವಿಠ್ಠಲ-ರುಕ್ಮಿಣಿ ದೇವರಿಗೆ ವಿಶೇಷವಾದ ಪೋಷಾಕು ಹಾಗೂ ಪಾರಂಪರಿಕ ಆಭರಣಗಳಿಂದ ಅಲಂಕರಿಸಲಾಗಿತ್ತು. 40 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿ ದರ್ಶನ  ಪಡೆದರು. ತಿರುಪತಿ ತಿರುಮಲದಲ್ಲಿ ನಡೆದ ವೆಂಕಟೇಶ್ವರ ದೇವರ ಸ್ವರ್ಣ ರಥೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸಿದ್ದರು. ಬೆಂಗಳೂರುನ ವಿವಿಧ ದೇಗುಲಗಳಲ್ಲಿ ವಿಶೇಷ ಅಲಂಕಾರ ಮಾಡಲಾಗಿತ್ತು. ಸಾವಿರಾರು ಭಕ್ತರು ವಿವಿಧ ದೇಗುಲಗಳಿಗೆ ಭೇಟಿ ನೀಡಿ ಪ್ರಾರ್ಥಿಸಿದರು.













ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − 10 =
Remember me
