ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ ಎಂಬ ನೂತನ ಪೊಲೀಸ್ ಪಡೆಯನ್ನು ಸ್ಥಾಪಿಸಲಿರುವ ಕುರಿತು ಇಂದು ಗೃಹಸಚಿವರು ಘೋಷಣೆ ಮಾಡಿದ ಬೆನ್ನಿಗೇ ಸ್ವಾಮೀಜಿಯೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ. ಮಾತ್ರವಲ್ಲ, ವಿಂಗ್ ಹೆಸರಿನಲ್ಲಿ ಹಿಂದು ಹುಡುಗರಿಗೆ ತೊಂದರೆ ಕೊಡುವಂತಿಲ್ಲ ಎಂದೂ ತಾಕೀತು ಮಾಡಿದ್ದಾರೆ.
ಇದನ್ನೂ ಓದಿ:ಪತಿಗಿಂತ ಪತ್ನಿಗೇ ಹೆಚ್ಚು ಸಂಪಾದನೆ; ಜೀವನಾಂಶ ನೀಡಲಾಗದು ಎಂಬುದನ್ನು ಎತ್ತಿ ಹಿಡಿದ ಕೋರ್ಟ್
ಮಂಗಳೂರಿನಲ್ಲಿ ಗುರುಪುರದ ಶ್ರೀವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಅವರು ‘ಆ್ಯಂಟಿ ಕಮ್ಯುನಲ್ ವಿಂಗ್’ ಕುರಿತು ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಸರ್ಕಾರ ದ್ವಂದ್ವ ನಿಲುವಿನಿಂದ ಸಮಾಜದಲ್ಲಿ ಕಂದಕ ಸೃಷ್ಟಿಸಬಾರದು. ತಂಗಿಯೊಬ್ಬಳು ಮತಾಂಧನ ಕೈಗೆ ಸಿಲುಕಿದಲ್ಲಿ ಅದನ್ನು ನೋಡಿಕೊಂಡು ಇರುವಂತಿಲ್ಲ ಎಂದಿರುವ ಸ್ವಾಮೀಜಿ, ವಿಂಗ್ ಹೆಸರಲ್ಲಿ ಅಮಾಯಕ ಹಿಂದು ಹುಡುಗರನ್ನು ತಡೆದರೆ ಪರಿಣಾಮ ನೆಟ್ಟಗಿರಲ್ಲ. ಕಾನೂನು ಪ್ರಕಾರವೇ ನಾವು ಉತ್ತರ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಯಾವುದೇ ಕ್ಷಣದಲ್ಲೂ ಬಿಬಿಎಂಪಿ ಚುನಾವಣೆ ಆಗಬಹುದು: ಸಚಿವ ರಾಮಲಿಂಗಾರೆಡ್ಡಿ
ದಕ್ಷಿಣಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್​ಗಿರಿ ಹೆಚ್ಚಾಗಿದೆ. ಇದನ್ನು ನಾವು ತಡೆಯದಿದ್ದರೆ ಇಲಾಖೆ ಹಾಗೂ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ನೈತಿಕ ಪೊಲೀಸ್​ಗಿರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದಕ್ಕಾಗಿ ಮಂಗಳೂರು ಕಮಿಷನರೇಟ್​ ವ್ಯಾಪ್ತಿಯಲ್ಲಿ ‘ಆ್ಯಂಟಿ ಕಮ್ಯುನಲ್ ವಿಂಗ್’ ಪ್ರಾರಂಭ ಮಾಡುತ್ತಿದ್ದೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇಂದು ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದರು.
ಒಬ್ಬ ಮಗನ ಚಿಕಿತ್ಸೆಗಾಗಿ ಇನ್ನೊಬ್ಬ ಮಗನನ್ನು ಮಾರಲೆತ್ನಿಸಿದ ತಂದೆ; ಪತಿ ವಿರುದ್ಧ ಪತ್ನಿಯ ದೂರು

ಬೆಂಗಳೂರು-ಮೈಸೂರು ದಶಪಥದಲ್ಲಿ ಭೀಕರ ಅಪಘಾತ: 2 ಸಲ ಪಲ್ಟಿಯಾದ ಕಾರು; ಐವರಿಗೆ ಗಾಯ, ಇಬ್ಬರ ಪರಿಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + twenty =
Remember me
