
ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಅವ್ಯವಹಾರ ಹಗರಣಕ್ಕೆ ಸಂಬಂಧಿಸಿ ಸಚಿವರ ರಾಜೀನಾಮೆ ಪಡೆದು ಅವರನ್ನು ಬಂಧಿಸಬೇಕು. ಇದರ ಹೊಣೆ ಹೊತ್ತ ಮುಖ್ಯಮಂತ್ರಿಗಳೂ ರಾಜೀನಾಮೆ ಕೊಡಬೇಕು ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯೂನಿಯನ್ ಬ್ಯಾಂಕ್ ಆ್ ಇಂಡಿಯವು ಬೆಂಗಳೂರಿನ ಸಿಬಿಐ ಕಚೇರಿಗೆ ದೂರು ಕೊಟ್ಟಿದೆ. ಅದರನ್ವಯ ಸಿಬಿಐ ತನಿಖೆ ನಡೆಯಲಿ ಎಂದೂ ಒತ್ತಾಯಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಹಗರಣಕ್ಕೆ ರಾಜ್ಯ ಸರಕಾರವೇ ನೇರ ಹೊಣೆ. ನಕಲಿ ಖಾತೆ ತೆರೆದು, ಕ್ರಿಯಾ ಯೋಜನೆ ಇಲ್ಲದೆ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಟೀಕಿಸಿದರು.ಕಾಂಗ್ರೆಸ್ ಸರಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ. ವಾಲ್ಮೀಕಿ ನಿಗಮದ ಹಣ ತೆಲಂಗಾಣದ ಯಾರ ಖಾತೆಗೆ ಹೋಗಿದೆ? ಯಾರು ಆ ವ್ಯಕ್ತಿಗಳು? ಎಂದ ಅವರು, ನಾಗೇಂದ್ರರು ಹಣವನ್ನು ನೇರವಾಗಿ ದರೋಡೆ ಮಾಡಿದ್ದಾಗಿ ಆಪಾದಿಸಿದರು.ದಾಖಲಾದ ಎ್ಐಆರ್‌ನಲ್ಲಿ ಮಂತ್ರಿ ಮೇಲೆ ಕೇಸಿಲ್ಲ; ಅಧಿಕಾರಿ ಮೇಲೆ ಕೇಸಿಲ್ಲ. ಬರೀ ಬ್ಯಾಂಕ್ ಅಧಿಕಾರಿ ಮೇಲೆ ಪ್ರಕರಣ ದಾಖಲಾಗಿದೆ. ಇದೇನು ಇಲಾಖೆ? ಎಂಥ ಕಾಮಿಡಿ ಇದು? ಇದು ಭಂಡತನದಿಂದ ಕೂಡಿದೆ ಎಂದು ದೂರಿದರು.ಕಾಂಗ್ರೆಸ್ ಪ್ರತಿಕ್ಷಣ ಅಧಿಕಾರ ದುರ್ಬಳಕೆ ಮಾಡಿಕೊಂಡು ಹಣ ಲೂಟಿ ಮಾಡುತ್ತಿದೆ.ಸರಕಾರ ಖಜಾನೆ ರಕ್ಷಿಸುವ ಬದಲು ನೇರವಾಗಿ ಖಜಾನೆಗೆ ಕೈ ಹಾಕಿದೆ ಎಂದು ಟೀಕಿಸಿದರು.ಕಾಂಗ್ರೆಸ್‌ನ ಅಧಿಕಾರ ದಾಹ, ಭ್ರಷ್ಟಾಚಾರದಲ್ಲಿ ತೊಡಗಿ, ಪ್ರತಿನಿತ್ಯ ಅವರನ್ನು ಬಯಲಿಗೆ ಎಳೆಯುವಂತಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಮಾಡಿಕೊಂಡಿದ್ದು, ಹಣ ದುರ್ಬಳಕೆ ಹಗರಣ ಸಂಬಂಧ ಸಚಿವರು, ಉನ್ನತಾಧಿಕಾರಿಗಳ ವಿರುದ್ಧ ಆಪಾದನೆ ಮಾಡಿದ್ದಾರೆ. ಇದನ್ನು ಡೆತ್ ನೋಟಿನಲ್ಲಿ ಬರೆದಿದ್ದರೂ ಎ್ಐಆರ್‌ನಲ್ಲಿ ಯೂನಿಯನ್ ಬ್ಯಾಂಕಿನವರನ್ನು ಮಾತ್ರ ಉಲ್ಲೇಖಿಸಿದ್ದಾರೆ ಎಂದು ಆಕ್ಷೇಪಿಸಿದರು.ಇದೊಂದು ಕೆಟ್ಟ ಸರಕಾರ, ದುಷ್ಟ ಸರಕಾರ ಮಾತ್ರವಲ್ಲದೆ ಭ್ರಷ್ಟ ಸರಕಾರ ಎಂದು ಅವರು ಆಪಾದಿಸಿದರು. ರಾಜ್ಯ ಬಿಜೆಪಿ ಕಾರ್ಯದರ್ಶಿ ತಮ್ಮೇಶ್ ಗೌಡ, ಬೆಂಗಳೂರು ಕೇಂದ್ರ ವಕ್ತಾರ ಬಿ.ವಿ.ಗಣೇಶ್ ಭಾಗವಹಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
