ಬೆಂಗಳೂರು:ವಾಲ್ಮೀಕಿ ಅಭಿವೃದ್ಧಿ ನಿಗಮದ ಲೆಕ್ಕಾಧಿಕಾರಿ ಪಿ. ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಸಿಐಡಿ ಪ್ರಾಥಮಿಕ ದೋಷಾರೋಪಪಟ್ಟಿ ಸಲ್ಲಿಸಿದೆ. ಅಚ್ಚರಿ ಎಂದರೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ನಿಗಮದ ಇಬ್ಬರು ಹಿರಿಯ ಅಧಿಕಾರಿಗಳನ್ನು ಆರೋಪಿ ಸ್ಥಾನದಲ್ಲಿ ನಿಲ್ಲಿಸಲಾಗಿದ್ದು, 87 ಕೋಟಿ ರೂ. ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷ ಶಾಸಕ ಬಸನಗೌಡ ದದ್ದಲ್ ಹೆಸರೇ ಉಲ್ಲೇಖವಾಗಿಲ್ಲ.
ಶಿವಮೊಗ್ಗದ ವಿನೋಬಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ನಿವಾಸದಲ್ಲಿ ಮೇ 26ರಂದು ಚಂದ್ರಶೇಖರನ್, ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೇ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ವಹಿವಾಟು ಹಗರಣ ಬೆಳಕಿಗೆ ಬಂದ ಹಿನ್ನೆಲೆ ಸಮಗ್ರ ತನಿಖೆ ಸಲುವಾಗಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿತ್ತು. ಈ ಮೇರೆಗೆ ಸಿಐಡಿ ಘಟಕದ ವಿಶೇಷ ತನಿಖಾ ತಂಡ (ಎಸ್​ಐಟಿ) ರಚನೆ ಮಾಡಲಾಗಿತ್ತು. ಆತ್ಮಹತ್ಯೆ ಪ್ರಕರಣ ಮತ್ತು ಅಕ್ರಮ ವಹಿವಾಟು, ನಕಲಿ ದಾಖಲೆ ಸೃಷ್ಟಿಸಿದ ಆರೋಪ ಕೇಳಿದಂತೆ 8 ಪ್ರಕರಣಗಳ ತನಿಖೆಯನ್ನು ಎಸ್​ಐಟಿ ತಂಡ ಕೈಗೊಂಡಿತ್ತು.
ಶಿವಮೊಗ್ಗದ ವಿನೋಬಾ ನಗರ ಠಾಣೆಯಲ್ಲಿ ಚಂದ್ರಶೇಖರನ್ ಆತ್ಮಹತ್ಯೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ದೌರ್ಜನ್ಯ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣ ಆಗಿದ್ದು, ಶಿವಮೊಗ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ 300 ಪುಟ ಒಳಗೊಂಡ ಪ್ರಾಥಮಿಕ ದೋಷಾರೋಪಣಾ ಪಟ್ಟಿಯನ್ನು ಗುರುವಾರ ಎಸ್​ಐಟಿ ಸಲ್ಲಿಸಿದೆ.
ಚಂದ್ರಶೇಖರನ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸದ್ಯ ಅಮಾನತುಗೊಂಡಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕ ಜೆ.ಜಿ. ಪದ್ಮನಾಭ್ ಮತ್ತು ಲೆಕ್ಕಾಧೀಕ್ಷಕ ಪರಶುರಾಮ ದುರ್ಗಣ್ಣನವರ್ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ. 25 ಮಂದಿ ಸಾಕ್ಷ್ಯಾಧಾರರ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಆತ್ಮಹತ್ಯೆಗೆ ಮಾನಸಿಕ ಒತ್ತಡವೇ ಕಾರಣ ಎಂದು ಉಲ್ಲೇಖಿಸಲಾಗಿದೆ.
ಗೋವಾದಲ್ಲಿ ಒತ್ತಡ:ನಿಗಮದಲ್ಲಿ ನಡೆದಿರುವ ಅವ್ಯವಹಾರವನ್ನು ಬಹಿರಂಗ ಮಾಡದಂತೆ ಚಂದ್ರಶೇಖರನ್​ರನ್ನು ಗೋವಾ ಮತ್ತು ಹೈದರಾಬಾದ್​ಗೆ ಕರೆದೊಯ್ದು ಪದ್ಮನಾಭ್ ಮತ್ತು ಪರಶುರಾಮ್ ಒತ್ತಡ ಹೇರಿದ್ದರು. ಬಹಿರಂಗ ಮಾಡಿದರೆ ಹಗರಣವನ್ನು ತಲೆಗೆ ಕಟ್ಟಿ ನಿಮ್ಮ ವಿರುದ್ಧವೇ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಬೇಕಾಗುತ್ತದೆ ಎಂದು ಬ್ಲಾ್ಯಕ್​ವೆುೕಲ್ ಮಾಡಿದ್ದರು. ಇದರಿಂದ ಮಾನಸಿಕವಾಗಿ ನೊಂದ ಚಂದ್ರಶೇಖರನ್, ಡೆತ್​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖವಾಗಿರು ವುದಾಗಿ ತಿಳಿದು ಬಂದಿದೆ.
ಸಚಿವರ ಕಚೇರಿ ಹೆಸರಷ್ಟೇ!: ಚಂದ್ರಶೇಖರನ್ ಬರೆದಿಟ್ಟಿದ್ದ ಡೆತ್ ನೋಟ್​ನಲ್ಲಿ ಪದ್ಮನಾಭ್, ಪರಶುರಾಮ್ ದುರ್ಗಣ್ಣನವರ್ ಹೆಸರು ಉಲ್ಲೇಖವಾಗಿತ್ತು. ಬಿ. ನಾಗೇಂದ್ರ ಮತ್ತು ಬಸನಗೌಡ ದದ್ದಲ್ ಹೆಸರು ಇರಲಿಲ್ಲ. ಆದರೆ, ಸಚಿವರ ಕಚೇರಿ ಎಂದಷ್ಟೇ ಬರೆದಿದ್ದರು ಎನ್ನಲಾಗಿದೆ. ಈ ಬಗ್ಗೆ ತನಿಖೆ ಏನಾಗಿದೆ ಎಂಬುದು ಕುತೂಹಲ ಮೂಡಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 17 =
Remember me
