ಬೆಂಗಳೂರು: ಸಂಪುಟ ವಿಸ್ತರಣೆ ವೇಳೆ ವಾಲ್ಮೀಕಿ ಸಮುದಾಯದ ಒಬ್ಬರಿಗೆ ಉಪ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಮನವಿ ಮಾಡಿದರು.
ನಮ್ಮ ಸಮುದಾಯಕ್ಕೆ ಒಂದು ಉಪ ಮುಖ್ಯಮಂತ್ರಿ ಹುದ್ದೆ ಕೊಡಿ ಎಂದು ಸಿಎಂ ಬಿ.ಎಸ್​.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇನೆ. ಶ್ರೀರಾಮುಲು ಮತ್ತು ರಮೇಶ್ ಜಾರಕಿಹೊಳಿ ಇಬ್ಬರೂ ನಮ್ಮ ಸಮುದಾಯದ ಎರಡು ಕಣ್ಣುಗಳು. ಇಬ್ಬರಲ್ಲಿ ಯಾರಿಗಾದರೂ ಒಬ್ಬರಿಗೆ ಅವಕಾಶ ಮಾಡಿಕೊಡಿ ಎಂದು ಕೋರಿದ್ದೇನೆ ಎಂದು ಶ್ರೀಗಳು ಹೇಳಿದರು.
ನಾನು ಡಿಸಿಎಂ ಆಗಬೇಕು ಎಂದು ಬೇಡಿಕೆ ಇಟ್ಟಿಲ್ಲ: ನಾನು ಡಿಸಿಎಂ ಆಗಬೇಕು ಎಂದು ಸಿಎಂ ಮುಂದೆ ಬೇಡಿಕೆ ಇಟ್ಟಿಲ್ಲ. ಆದರೆ ನಮ್ಮ ಸಮಾಜ ಹಾಗೂ ಇತರರು ನಾನು ಡಿಸಿಎಂ ಆಗಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಸಿಎಂ ಏನು ನಿರ್ಧಾರ ಮಾಡುತ್ತಾರೆ ಎಂದು ಕಾದುನೋಡಬೇಕು ಎಂದು ಸಚಿವ ಶ್ರೀರಾಮುಲು ಹೇಳಿದರು.
ಡಿಸಿಎಂ ಪದವಿಗಾಗಿ ವಾಲ್ಮೀಕಿ ಸಮುದಾಯದ ಬಿ.ವಿ.ಶ್ರೀರಾಮುಲು ಹಾಗೂ ರಮೇಶ್​ ಜಾರಕಿಹೊಳಿ ನಡುವೆ ಪೈಪೋಟಿ ನಡೆದಿದೆ. ಕಾಂಗ್ರೆಸ್​ನಿಂದ ಬಿಜೆಪಿ ಬಂದ ರಮೇಶ್​ ಜಾರಕಿಹೊಳಿಗೆ ಸಿಎಂ ಡಿಸಿಎಂ ಪದವಿ ನೀಡುವುದಾಗಿ ಹೇಳಿದ್ದಾರೆ. ಹೀಗಾಗಿ ಶ್ರೀರಾಮುಲು ಅವರಿಗೆ ಡಿಸಿಎಂ ಪದವಿ ಅನುಮಾನ ಎನ್ನಲಾಗುತ್ತಿದೆ. ಸಿಎಂ ಯಾರಿಗೆ ಪಟ್ಟ ನೀಡುತ್ತಾರೆ ಎಂಬುದ ರಹಸ್ಯವಾಗಿದೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
