ನವದೆಹಲಿ:ವಾಲ್ಮೀಕಿ ನಿಗಮಕ್ಕೆ ಸಂಬಂಧಿಸಿದ ಸುಮಾರು 40 ಕೋಟಿ ರೂ. ಹಣ ನೇರವಾಗಿ ರಾಜ್ಯ ಸರ್ಕಾರದ ಖಜಾನೆಯಿಂದ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿರುವ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟೀಕರಣ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಕೆಂಪಾಂಬುದಿ ಕೆರೆ ಒತ್ತುವರಿ ಶೀಘ್ರ ತೆರವು: ಡಿಸಿಎಂ ಡಿ.ಕೆ.ಶಿವಕುಮಾರ್
ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದ ಆಳ‌ ಮತ್ತು ಅಗಲ ನೋಡಿದರೆ ಹೊಸ ತಿರುವುಗಳಿಗೆ ಕಾರಣವಾಗುತ್ತಿದೆ. ಇದಕ್ಕೆ ಅಂತ್ಯಾನೇ ಇಲ್ಲ ಅಂತ ಅನಿಸುತ್ತದೆ. ಈಗಾಗಲೇ ಹಲವಾರು ಅಕೌಂಟ್‌ಗಳನ್ನು ತೆರೆದು ಹೈದರಾಬಾದ್ ಗೆ ಹಣ ವರ್ಗಾವಣೆಯಾಗಿರುವುದು ಬೆಳಕಿಗೆ ಬಂದಿದೆ. ಆದರೆ, ಅದು ಹಣಕಾಸು ಇಲಾಖೆಗೆ ಸಂಬಂಧ ಇಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ ಎಂದು ಟೀಕಿಸಿದರು.
ನಮಗೆ ಇತ್ತೀಚೆಗೆ ಒಂದು ಮಾಹಿತಿ ಬಂದಿದೆ. ಮಾರ್ಚ್ 31 ರಂದು ನೇರವಾಗಿಯೇ ರಾಜ್ಯ ಸರ್ಕಾರದ ಖಜಾನೆಯಿಂದ ಸುಮಾರು 40 ಕೋಟಿ ರೂ. ಅಧಿಕೃತ ಖಾತೆಗೆ ಹೋಗದೇ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಿದೆ ಎಂಬ ಮಾಹಿತಿ ಇದೆ. ಇದು ಹೇಗೆ ಹೊರಗೆ ಬಂದಿದೆ ಎಂದರೆ, ಪೇಮೆಂಟ್ ಮಾಡಿರುವ ಚಲನ್ ಅನು ಕಂಪ್ಯೂಟರದ ನಿಂದ ತೆಗೆದು ಹಾಕುವ ಪಯತ್ನವಾಗಿದೆ. ಆ ಹಿನ್ನೆಲೆಯಲ್ಲಿ ಖಜಾನೆಯಲ್ಲಿ ಸ್ವಲ್ಪ ಗಲಿಬಿಲಿಯಾಗಿದೆ.
ಹೀಗಾಗಿ ಈ ವಿಷಯ ಹೊರಗೆ ಬಂದಿದೆ. ಮುಖ್ಯಮಂತ್ರಿಗಳು ಈ ಬಗ್ಗೆ ವಿಧಾನಸಭೆಯಲ್ಲಿ ಸ್ಪಷ್ಟಿಕರಣ ನೀಡಬೇಕು. ಪಾಲ್ಮೀಕಿ ನಿಗಮಕ್ಕೆ ಎಷ್ಟು ಹಣ ಬಿಡುಗಡೆಯಾಗಿದೆ. ಮಾರ್ಚ್ 31 ಕೈ ಖಜಾನೆಯಿಂದ ಹಣ ಬಿಡುಗಡೆಯಾಗಿದೆಯಾ, ಬಿಡುಗಡೆಯಾಗಿದ್ದರೆ ಯಾವ ಖಾತೆಗೆ ಬಿಡುಗಡೆಯಾಗಿದೆ. ಚಲನ್ ನಾಶ ಮಾಡುವ ಪ್ರಯತ್ನ ನಡೆದಿದೆಯೋ ಇಲ್ಲವೋ ಎನ್ನುವ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟಿಕರಣ ನೀಡಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಗೋವಿಂದ ಕಾರಜೋಳ ಹಾಜರಿದ್ದರು.
ಮುಡಾ ಹಗರಣಕ್ಕೆ ರಾಜ್ಯಪಾಲರ ಎಂಟ್ರಿ: ವರದಿ ಕೇಳಿದ ಥಾವರ್‌ ಚಂದ್‌ ಗೆಹ್ಲೋಟ್‌!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 2 =
Remember me
