ಬೆಂಗಳೂರು:ವಾಲ್ಮೀಕಿ ನಿಗಮದ ಅಕ್ರಮದ ಪ್ರಕರಣದಲ್ಲಿ ಸರ್ಕಾರ ತಪ್ಪು ಮಾಡಿದವರ ರಕ್ಷಣೆಗೆ ನಿಂತಿಲ್ಲ. ತಪ್ಪು ಮಾಡಿದವರು ಯಾರೇ ಆಗಿದ್ದರೂ ಕಾನೂನು ಪ್ರಕಾರ ಕ್ರಮ ಜರುಗಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರಿಗಳು ಆಗಿರಬಹುದು ಅಥವಾ ರಾಜಕೀಯ ವ್ಯಕ್ತಿಗಳು ಇರಬಹುದು, ಯಾರೇ ಇದ್ದರೂ ಕ್ರಮ ಜರುಗಿಸುವುದು ಖಚಿತ ಎಂದು ತಿಳಿಸಿದರು.
ಈ ಪ್ರಕರಣದಲ್ಲಿ ಸಿಬಿಐನವರು ಬ್ಯಾಂಕ್ ಅಧಿಕಾರಿಗಳ ವಂಚನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ. ಇಲಾಖೆಯಲ್ಲಿನ ವಂಚನೆಯ ಕುರಿತು ಎಸ್‌ಐಟಿ ತನಿಖೆ ನಡೆಸುತ್ತಿದೆ. ಬಿಜೆಪಿಯವರು ಪ್ರತಿಭಟನೆ ಮಾಡಲಿ, ಸಿಎಂ ಮನೆಗರ ಮುತ್ತಿಗೆ ಹಾಕಲಿ ಯಾರು ಬೇಡ ಅನ್ನುತ್ತಾರೆ. ತನಿಖೆ ವೇಳೆ ಸಚಿವರು, ಶಾಸಕರ ಮೇಲೆ ಆರೋಪಗಳನ್ನು ಮಾಡುವುದು ಸಹಜ. ತನಿಖೆಯ ವರದಿ ಆಧಾರದ ಮೇಲೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಸರ್ಕಾರದ ಭವಿಷ್ಯದ ಕುರಿತು ಸಿ.ಟಿ.ರವಿ, ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಅವರು, ಅವರವರ ವ್ಯಾಖ್ಯಾನಗಳು ಅವು. ಅವರಲ್ಲೇ ಅವರ ಹೇಳಿಕೆಗಳು ವಿಭಿನ್ನವಾಗಿವೆ. ಬೊಮ್ಮಾಯಿ ಒಂದು ಹೇಳಿಕೆ ಕೊಟ್ಟರೆ, ಸಿ.ಟಿ.ರವಿ ಇನ್ನೊಂದು ಹೇಳಿಕೆ ಕೊಡುತ್ತಾರೆ. ಅವರಲ್ಲಿ ಹೊಂದಾಣಿಕೆ ಇಲ್ಲ. ಸರ್ಕಾರ ಅಭಿವೃದ್ಧಿಯನ್ನು ಮರೆತಿಲ್ಲ. ಜನರಿಗೆ ಕೊಟ್ಟ ಮಾತನ್ನು ಮರೆತಿಲ್ಲ. ಗ್ಯಾರಂಟಿ ಯೋಜನೆಗಳ ಜತೆ ಎಲ್ಲ ಕೆಲಸಗಳನ್ನು ಮಾಡುತ್ತಿದ್ದೇವೆ. ಯಾವ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ ಎಂದರು.
ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟದ ಕುರಿತ ಪ್ರಶ್ನೆಗೆ, ಹೋರಾಟದ ಉದ್ದೇಶಗಳು ಸರಿಯಿದ್ದರೆ ಸರ್ಕಾರ ಗಮನಿಸುತ್ತದೆ. ಕಾನೂನು ಸುವ್ಯವಸ್ಥೆ ಯಾರು ಸಹ ಕೈಗೆತ್ತಿಕೊಳ್ಳಬಾರದು ಎಂದು ಡಾ.ಜಿ.ಪರಮೇಶ್ವರ ಹೇಳಿದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:eighteen − thirteen =
Remember me
