ಬೆಂಗಳೂರು:ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಶುಕ್ರವಾರ ಜಾರಿ ನಿರ್ದೇಶನಾಲಯ ಬಂಧನ ಮಾಡಿದೆ. ಇನ್ನು ಕೆಲವೇ ಕ್ಷಣಗಳಲ್ಲಿ ಕೋರ್ಟ್​ಗೆ ಹಾಜರುಪಡಿಸಲು ಇಡಿ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ:ಲೋಕಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕಾರಣ ನಡೆದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆಯಿಂದ ನಾಗೇಂದ್ರ ಅವರನ್ನು ವಿಚಾರಣೆ ನಡೆಸುತ್ತಿದ್ದ ಇಡಿ ಅಧಿಕಾರಿಗಳು, ಇದೀಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. ಕಳೆದ ಎರಡು ಎರಡು ದಿನಗಳಿಂದ ನಾಗೇಂದ್ರ ಮನೆಯಲ್ಲಿ ವಾಲ್ಮೀಕಿ ನಿಗಮದ ದಾಖಲೆಗಳ ಬಗ್ಗೆ ಶೋಧ ನಡೆಸಿದ್ದ ಅಧಿಕಾರಿಗಳು ಇಂದು ವಿಚಾರಣೆ ಮಾಡಿ ಮುಂಜಾನೆ ವಶಕ್ಕೆ ಪಡೆದಿದ್ದರು. ಇದೀಗ ತೀವ್ರ ವಿಚಾರಣೆ ಬಳಿಕ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದಾರೆ.
ಕಳೆದ ಎರಡು ದಿನದಿಂದ ಶೋಧ ಕಾರ್ಯ ನಡೆಸಿದ ಇ.ಡಿ ಅಧಿಕಾರಿಗಳು ಈಗ ನಾಗೇಂದ್ರ ಅವರನ್ನು ಅರೆಸ್ಟ್ ಮಾಡಿದ್ದಾರೆ. 94 ಕೋಟಿ ರುಪಾಯಿ ನಿಗಮದ ಹಣವನ್ನು ಅಕ್ರಮವಾಗಿ ಬಳಸಿಕೊಳ್ಳಲಾಗಿತ್ತು. ಹೀಗಾಗಿ ಇಡಿ ಏಕಕಾಲದಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿತ್ತು. ಬಿ ನಾಗೇಂದ್ರ ಅವರ ಮೇಲೆ ಆಪ್ತನೋರ್ವನಿಂದ 25 ಲಕ್ಷ ಲಂಚ ಸ್ವೀಕರಿಸಿರುವ ಆರೋಪ ಇದೆ. ಈ ಬಗ್ಗೆ ಪಿಎ ಹರೀಶ್‌ಗೆ ಹಣ ನೀಡಿದ್ದಾಗಿ ಖುದ್ದು ಪದ್ಮನಾಭ್ ಹೇಳಿಕೆ ನೀಡಿದ್ದರು.
ನಾಗೇಂದ್ರ ಪರ ಹವಾಲಾ ಹಣ ಮತ್ತು ಚಿನ್ನದ ಬಿಸ್ಕೆಟ್‌ ಪಡೆದ ಆರೋಪ ಇದ್ದು, ಮಾಜಿ ಸಚಿವ ನಾಗೇಂದ್ರ ಪರ 50ರಿಂದ 60 ಕೋಟಿ ವ್ಯವಹಾರ ನಡೆದಿದೆ ಎನ್ಣುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಹೆಚ್ಚಿನ ವಿಚಾರಣೆ ನಡೆಸಲು ಹರೀಶ್‌ನನ್ನು ಇಡಿ ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಮೊದಲು ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ನಡೆದಿರುವುದು ಬೆಳಕಿಗೆ ಬಂದ ನಂತರ ವಿಪಕ್ಷಗಳು ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದ್ದವು. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ನಾಗೇಂದ್ರ ಅವರು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರು ಮತ್ತು ಕ್ರೀಡಾ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ: ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್​ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
