ಬೆಂಗಳೂರು:ಕೃಷಿ ವಿಶ್ವವಿದ್ಯಾಲಯದಿಂದ ಒಟ್ಟು 27 ತಳಿಗಳು ಬಿಡುಗಡೆಯಾಗಿದ್ದು, ಈ ತಳಿಗಳ ಮೌಲ್ಯವರ್ಧನೆ ಮತ್ತು ರೈತರ ಬಳಕೆಯ ಬಗ್ಗೆ ಮೌಲ್ಯಮಾಪನ ಮಾಡಿಸಬೇಕಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟರು.
ವಿಕಾಸಸೌಧದ ತಮ್ಮ ಕಚೇರಿ ಕೊಠಡಿಯಲ್ಲಿ ಕೃಷಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಹಾಗೂ ಯೋಜನೆಗಳ ಅನುಷ್ಠಾನ, ಕೈಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲಿಸಿ ಮಾತನಾಡಿದರು.ಆಯಾ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ವಿಜ್ಞಾನಿಗಳ ಜವಾಬ್ದಾರಿ ಹೆಚ್ಚಿದ್ದು ಇದನ್ನು ಅರಿತು ಕಾರ್ಯ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.
ಜಲಾನಯನ ಇಲಾಖೆಯ ಆರ್.ಕೆ ವಿ.ವೈ ಯೋಜನೆಯಡಿ ಕೈಗೊಂಡಿರುವ 4.16 ಕೋಟಿ ರೂ. ಮೊತ್ತದ ಯೋಜನೆಯ ಪ್ರಗತಿ ಪರಿಶೀಲಿಸಿದ ಸಚಿವರು, ಇನ್ನಷ್ಟು ಚೆನ್ನಾಗಿ ಅನುಷ್ಠಾನ ಮಾಡಲು ಸೂಚಿಸಿದರು.
ಅಂತರಾಷ್ಟ್ರೀಯ ಸಂಸ್ಥೆಗಳೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆ ಗಳಿಂದ ಕರ್ನಾಟಕದ ಕೃಷಿ ಹಾಗೂ ವಿದ್ಯಾರ್ಥಿಗಳಿಗೆ ಆಗಿರುವ ಪ್ರಯೋಜನಗಳ ಬಗ್ಗೆ ಸಚಿವರು ಮಾಹಿತಿ ಪಡೆದರು. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಕೃಷಿ ವಿಶ್ವವಿದ್ಯಾಲಯದಿಂದ ನೀಡುತ್ತಿರುವ ಸೌಲಭ್ಯಗಳ ಬಗ್ಗೆಯೂ ಪರಿಶೀಲಿಸಿದರು.
ಕೃಷಿ ವಿಶ್ವವಿದ್ಯಾಲಯಗಳಿಂದ ನೆರವು ಪಡೆದ ಕೃಷಿ ನವೋದ್ಯಮಗಳ ಚಟುವಟಿಕೆಗಳ ಬಗ್ಗೆ ಅವುಗಳ ಆರ್ಥಿಕ ವಹಿವಾಟು ಬಗ್ಗೆ ಪರಿಶೀಲಿಸಿ, ಇನ್ನಷ್ಟು ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡುವಂತೆ ತಿಳಿಸಿದರು.
ತಳಿ ವರ್ಧಕ, ಮೂಲಬೀಜ/ಪ್ರಮಾಣಿತ ಬೀಜಗಳ ಉತ್ಪಾದನೆ ಒಟ್ಟಾರೆ 39,096 ಕ್ವಿಂಟಾಲ್‌ಗಳಷ್ಟಿದ್ದು, ಹೆಚ್ಚುವರಿಯಾಗಿ ಉತ್ಪಾದಿಸಲು ಹಾಕಿಕೊಂಡಿರುವ ಕಾರ್ಯಕ್ರಮಗಳ ಬಗ್ಗೆ ಹಾಗೂ ಕೃಷಿ ವಿವಿಗಳಿಗೆ ಹೊಸ ಹುದ್ದೆ ಮಂಜೂರಾತಿ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಸಿ/ಎಸ್.ಟಿ ವಿದ್ಯಾರ್ಥಿಗಳಿಗೆ ಸೌಲಭ್ಯ ನೀಡದೇ ಇರುವ ದೂರುಗಳಿದ್ದು ಈ ಬಗ್ಗೆ ಗಮನಹರಿಸದಿದ್ದರೆ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ಸಚಿವ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − two =
Remember me
