ಬೆಂಗಳೂರು: ಸಂಜಯನಗರದ ಶರಣ ಸೇವಾ ಸಮಿತಿಯ ವಾರ್ಷಿಕೋತ್ಸವದ ಅಂಗವಾಗಿ ಭಾನುವಾರ ಶ್ರೀಜಗದ್ಗುರು ರೇಣುಕಾಚಾರ್ಯ ಯುಗಮಾನೋತ್ಸವ, ಶ್ರೀಬಸವೇಶ್ವರ ಜಯಂತಿ ಮತ್ತು ಶ್ರೀ ಶಿವಕುಮಾರ ಸ್ವಾಮಿಗಳ 116ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಂಜೆ 4ಕ್ಕೆ ಗೆದ್ದಲಹಲ್ಳಿ ಆಂಜನೇಯಸ್ವಾಮಿ ದೇವಾಲಯದಿಂದ ವಿವಿಧ ಜಾನಪದ ಕಲಾಮೇಳಗಳೊಂದಿಗೆ ಮೆರವಣಿಗೆ ಆಯೋಜಿಸಲಾಗಿದ್ದು, ನಂತರ ಸಂಜೆ 5.30ಕ್ಕೆ ಧರ್ಮ ಸಭೆ ನಡೆಯಲಿದೆ.
ಸಂಜಯನಗರದ ರಮಣ ಮಹರ್ಷಿ ಹೆರಿಟೇಜ್ ಸೆಂಟರ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಧಾರವಾಡದ ಉಪ್ಪಿನ ಬೆಟಗೇರಿ ಮೂರುಸಾವಿರ ವಿರಕ್ತ ಮಠದ ಶ್ರೀ ಕುಮಾರ ವಿರೂಪಾಕ್ಷ ಸ್ವಾಮಿಗಳು ವಹಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರದ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಬೈರತಿ ಸುರೇಶ್, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯನಾಯ್ಡು ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + four =
Remember me
