ಬೆಂಗಳೂರು:ರಾಜ್ಯ ಸರ್ಕಾರ ನೀಡುವ 2022-23 ಮತ್ತು 2023-24ನೇ ಸಾಲಿನ ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ, ಜಾನಪದ ಶ್ರೀ ಪ್ರಶಸ್ತಿ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರಕಟಿಸಿದ್ದು, ಎಂಟು ಮಂದಿ ಕಲಾವಿದರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಪ್ರಶಸ್ತಿಗಳು ತಲಾ 5 ಲಕ್ಷ ನಗದು ಒಳಗೊಂಡಿವೆ.
‘ವರ್ಣಶಿಲ್ಪಿ ವೆಂಕಟಪ್ಪ ಪ್ರಶಸ್ತಿ’ಗೆ ಮೈಸೂರಿನ ಜಿ.ಎಲ್.ಎನ್.ಸಿಂಹ ಮತ್ತು ಕಲಬುರಗಿಯ ಬಸವರಾಜ ಎಲ್. ಜಾನೆ, ‘ಜಕಣಾಚಾರಿ ಪ್ರಶಸ್ತಿ’ಗೆ ಕಲಬುರಗಿಯ ಮಹದೇವಪ್ಪ ಎಲ್.ಶಿಲ್ಪಿ ಮತ್ತು ಚಿಕ್ಕಮಗಳೂರಿನ ಎಸ್.ಪಿ. ಜಯಣ್ಣಾಚಾರ್, ಜಾನಪದ ಶ್ರೀ ಪ್ರಶಸ್ತಿಗೆ ದಕ್ಷಿಣ ಕನ್ನಡದ ಅರುವ ಕೊರಗಪ್ಪ ಶೆಟ್ಟಿ (ಯಕ್ಷಗಾನ), ಬೀದರ್‌ನ ಕಲ್ಲಪ್ಪ ಮಿರ್ಜಾಪುರ (ರಿವಾಯತ್ ಪದಗಳು), ಚಿಕ್ಕಮಗಳೂರಿನ ಜಿ.ಪಿ. ಜಗದೀಶ್ (ವೀರಗಾಸೆ) ಹಾಗೂ ಚಿತ್ರದುರ್ಗದ ಹಲಗೆ ದುರ್ಗಮ್ಮ (ಹಲಗೆ ವಾದನಲಾವಣಿ ಪದಗಳು) ಆಯ್ಕೆಯಾಗಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.
ಕಲಾವಿದ ವಿ.ಟಿ. ಕಾಳೆ ಅಧ್ಯಕ್ಷತೆಯ ಸಮಿತಿ ಪುರಸ್ಕೃತರನ್ನು ಆಯ್ಕೆ ಮಾಡಿದೆ. ಜಕಣಾಚಾರಿ ಪ್ರಶಸ್ತಿಯನ್ನು ಜ.1ರಂದು ನಡೆಯುವ ವಿಶ್ವಕರ್ಮ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯಲ್ಲಿ ಪ್ರದಾನ ಮಾಡಲಾಗುವುದು. ಉಳಿದ ಪ್ರಶಸ್ತಿಗಳನ್ನು ಜನವರಿ ಕೊನೆಯ ವಾರ ಅಥವಾ ಫೆಬ್ರವರಿ ತಿಂಗಳಲ್ಲಿ ಪ್ರದಾನ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × 3 =
Remember me
