ಕೋಲಾರ :ಕೃತ್ಯ ನಡೆದು ವಾರದ ಬಳಿಕ ಬಹಿರಂಗಪಡಿಸಿದ ಮಾಜಿ ಶಾಸಕ ವರ್ತೂರು ಆರ್. ಪ್ರಕಾಶ್ ಮತ್ತು ಕಾರು ಚಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಕುತೂಹಲ ಕೆರಳಿಸಿದೆ. ವಿಶೇಷ ಅಂದರೆ ಇದುವರೆಗೂ ಆರೋಪಿಗಳು ಯಾರೆಂಬುದನ್ನು ಗುರುತಿಸುವುದಕ್ಕಾಗಿಲ್ಲ.
ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ವರ್ತೂರು ಪ್ರಕಾಶ್ ಮತ್ತು ಚಾಲಕನ ಅಪಹರಣಕ್ಕೆ ಸಂಬಂಧಿಸಿದ ತನಿಖೆ ಮುಂದುವರಿದಿದ್ದು, ಇದುವರೆಗೆ ಯಾರನ್ನೂ ಬಂಧಿಸಿಲ್ಲ. ಪ್ರಕಾಶ್ ಮತ್ತು ಚಾಲಕ ಸುನೀಲ್ ನೀಡಿರುವ ದೂರು ಆಧರಿಸಿ ಆರೋಪಿಗಳನ್ನು ಸೆರೆ ಹಿಡಿಯಲು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ. ಕೆಲವರ ವಿಚಾರಣೆ ನಡೆಸಲಾಗಿದೆಯೇ ಹೊರತು ಬಂಧಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ:ನರ್ಸ್​ಗಳ ಬೆತ್ತಲೆ ವಿಡಿಯೋ ಚಿತ್ರೀಕರಿಸಿ ಪ್ರಿಯಕರನಿಗೆ ಕಳುಹಿಸುತ್ತಿದ್ದಳಾಕೆ: ಮೊಬೈಲಲ್ಲಿದ್ದವು ನೂರಾರು ವಿಡಿಯೋ!
ಬೆಂಗಳೂರು ಮೂಲದ ನಾಲ್ವರನ್ನು ತನಿಖಾ ತಂಡ ವಶಕ್ಕೆ ಪಡೆದಿದೆ. ಅಪಹರಣಕ್ಕೆ ಪ್ರಚೋದನೆ ನೀಡಿದ ಪ್ರಮುಖ ಆರೋಪಿಗಳ ಪತ್ತೆಗೆ ತಮಿಳುನಾಡು ಸೇರಿ ಇನ್ನಿತರೆಡೆ ಶೋಧನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ತಮ್ಮನ್ನು ಹಸು, ಹಣ ಹಾಗೂ ಹೆಣ್ಣಿನ ವಿಚಾರವಾಗಿ ಯಾರೂ ಅಪಹರಿಸಿಲ್ಲ, ನನ್ನಲ್ಲಿ ಹಣ ಇದೆ ಎಂಬ ಕಾರಣಕ್ಕೆ ಅಪಹರಿಸಿದ್ದರು ಎಂದು ವರ್ತೂರು ತಿಳಿಸಿದ್ದರು.
ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮಫೇಸ್​ಬುಕ್​ ಪುಟಲೈಕ್ ಮಾಡಿ ಮತ್ತು ಫಾಲೋ ಮಾಡಿ..
ವೇತನ ಸಿಗದೆ ಹತಾಶರಾದ ನೌಕರರಿಂದ ಕಲ್ಲುತೂರಾಟ, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − six =
Remember me
