ಬೆಂಗಳೂರು:‘ಕಿತ್ತೋದ್ ನನ್ ಮಗ’ ಹೇಳಿಕೆ ತಿರುಚಿ, ಅಪಪ್ರಚಾರ ಮಾಡಲಾಗುತ್ತಿದೆ ಎಂದು ನಟ ಜಗ್ಗೇಶ್ ಪೊಲೀಸರಿಗೆ ದೂರು ನೀಡಿದ್ದಾರೆ.
ವರ್ತೂರು ಸಂತೋಷ್​  ಹುಲಿ ಉಗುರಿನ ಲಾಕೆಟ್​ ಧರಿಸಿ ಬಿಗ್​ ಬಾಸ್​ ಮನೆಗೆ ಹೋಗಿದ್ದಾಗ  ಬಂಧಿಸಲಾಗಿತ್ತು. ಆ ಬಳಿಕ ಹುಲಿ ಉಗುರು ಹೊಂದಿದ ಆರೋಪದಲ್ಲಿ ಅನೇಕ ಸೆಲೆಬ್ರಿಟಿಗಳು ಕಾನೂನಿನ ಸಂಕಷ್ಟ ಎದುರಿಸಿದ್ದರು. ಜಗ್ಗೇಶ್​ ಅವರಿಗೂ ನೋಟಿಸ್​ ನೀಡಲಾಗಿತ್ತು.
ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಜಗ್ಗೇಶ್‌, ‘ಯಾವನೋ ಕಿತ್ತೋದ್ ನನ್ ಮಗ, ರಿಯಲ್ ಆಗಿ ಹುಲಿ ಉಗುರು ಹಾಕ್ಕೊಂಡು, ಯಾವುದೋ ಟಿವಿಯಲ್ಲಿ ತಗಲಾಕ್ಕೊಂಡ..’ಎಂದಿದ್ದರು. ಜಗ್ಗೇಶ್​ ಮಾತನಾಡಿದ ರೀತಿಯನ್ನು ಅನೇಕರು ಖಂಡಿಸಿದ್ದಾರೆ. ಈ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಆಗಿತ್ತು. ಈಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜಗ್ಗೇಶ್​ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ತಮ್ಮ ಹೇಳಿಕೆಯನ್ನು ತಿರುಚಿ, ಸೋಶಿಯಲ್​ ಮೀಡಿಯಾದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಮಾಡಿ ಹೆಬ್ಬಗೋಡಿಯ ನಾರಾಯಣಸ್ವಾಮಿ ಮತ್ತು ಇನ್ನೋರ್ವ ವ್ಯಕ್ತಿಯ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಜಾತಿನಿಂದನೆ ,ಅವಾಚ್ಯ ಪದಗಳ ಬಳಕೆ, ಮುಖಕ್ಕೆ ಮಸಿ ಬಳಿಯುವ ಬೆದರಿಕೆ ಹಾಕಲಾಗಿದೆ ಎಂದು ಜಗ್ಗೇಶ್​ ಅವರು ಆರೋಪ ಮಾಡಿದ್ದಾರೆ.
‘ತಪ್ಪು ಸಂದೇಶ ಕೊಟ್ಟು ಜಾತಿ ಗಲಭೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ನೀಡಲಾಗುತ್ತಿದೆ. ಕಿತ್ತೋದ್ ನನ್ ಮಗ ಎಂಬುದು ಗ್ರಾಮೀಣ ಭಾಷೆಯಾಗಿದ್ದು, ಅದನ್ನು ತಿರುಚಿ ಪ್ರಚೋದಿಸಲಾಗುತ್ತಿದೆ’ ಎಂದು ಜಗ್ಗೇಶ್​  ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಿಸಿದ್ದಾರೆ.
ಶಾಲಾ ತರಗತಿಗಳಲ್ಲಿ ಮೊಬೈಲ್ ಫೋನ್ ನಿಷೇಧ; ಬ್ರಿಟನ್ ಪ್ರಧಾನಿ ರಿಶಿ ಸುನಕ್

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four × 5 =
Remember me
