ಬಾಗಲಕೋಟೆ:ಲೋಕಸಭಾ ಚುನವಾಣೆ 2024ರ ಕಾವು ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ಸದ್ಯ ಬಾಗಲಕೋಟೆ ಕ್ಷೇತ್ರದಲ್ಲಿ ಯಾರಿಗೆ ಅಧಿಕಾರ ಪಟ್ಟ ಸಿಗಲಿದೆ ಎಂಬುದೇ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ ಮತ್ತು ಜನರಲ್ಲಿ ಭಾರೀ ಕುತೂಹಲ ಕೆರಳಿಸಿದೆ. ಒಂದೆಡೆ ಬಿಜೆಪಿಯಿಂದ ಪಿ.ಸಿ. ಗದ್ದಿಗೌಡರು ಕಣಕ್ಕಿಳಿದರೆ, ಮತ್ತೊಂದೆಡೆ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಯಾಗಿ ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ್ ಸಖತ್ ಟಕ್ಕರ್ ಕೊಡಲು ಅಖಾಡದಲ್ಲಿದ್ದಾರೆ.
ಇದನ್ನೂ ಓದಿ:ನೇಹಾ ಹಿರೇಮಠ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​ ಕೊಟ್ಟ ಪರಮೇಶ್ವರ್​!
ಇಂದು ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಯುಕ್ತಾ ಪಾಟೀಲ್ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆಗೆ ಟಿಕೆಟ್​ ವಂಚಿತೆ, ಬಹಳ ದಿನಗಳಿಂದ ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ಅಸಮಾಧಾನ ಹೊಂದಿದ್ದ ಶಾಸಕ ವಿಜಯಾನಂದ ಕಾಶಪ್ಪನವರ್ ಪತ್ನಿ ವೀಣಾ ಕಾಶಪ್ಪನವರ್ ಕಡೆಗೂ ಮುನಿಸು ಮುರಿದು ಪತಿಯೊಂದಿಗೆ ಸಂಯುಕ್ತಾ ಪರ ಬ್ಯಾಟ್ ಬೀಸಿದ್ದಾರೆ.
ಸಂಯುಕ್ತಾ ಪಾಟೀಲ್ ನಾಮಪತ್ರ ಸಲ್ಲಿಕೆಯಲ್ಲಿ ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಮಾಜಿ ಸಚಿವ ಎಸ್. ಪಾಟೀಲ, ಮಾಜಿ ಶಾಸಕ ಆನಂದ ನ್ಯಾಮಗೌಡ, ಸಚಿವರಾದ ಸತೀಶ್ ಜಾರಕಿಹೊಳಿ, ಆರ್.ಬಿ. ತಿಮ್ಮಾಪುರ, ಶಾಸಕರಾದ ಎಚ್.ವೈ. ಮೇಟಿ, ಜೆ.ಟಿ. ಪಾಟೀಲ ಭಾಗಿಯಾಗಿ ಸಂಯುಕ್ತಾ ಪರ ಭಾರೀ ಬೆಂಬಲ ವ್ಯಕ್ತಪಡಿಸಿದ್ದಾರೆ. ವೀಣಾ ಮತ್ತು ಸಂಯುಕ್ತಾ ವಿರುದ್ಧ ಇದ್ದ ಮುನಿಸು ಇದೀಗ ಶಮನಗೊಂಡಿದ್ದು, ಇದು ವೀಣಾ ಅಭಿಮಾನಿಗಳಲ್ಲಿ ಭಾರೀ ಸಂತಸಕ್ಕೆ ಕಾರಣವಾಗಿದೆ.
ನೀನೆಂದಿಗೂ ನನ್ನ ಜತೆಯಲ್ಲೇ ಇರ್ತೀಯಾ ಮಗನೇ; ಭಾವುಕರಾದ ಶಿಖರ್ ಧವನ್​ಗೆ ಫ್ಯಾನ್ಸ್​ ಆಸರೆ

4 ಗಂಟೆಗಳ ಕಾಲ ಅವರಿಬ್ಬರು ಹೀಗೆ ಇದ್ರು! ಅದನ್ನು ನೋಡಿ… ಪ್ರಯಾಣಿಕ ಹರಿಬಿಟ್ಟ ದೃಶ್ಯ ನೋಡಿ ದಂಗಾದ ನೆಟ್ಟಿಗರು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 + 8 =
Remember me
