ಮಂಡ್ಯ:ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರಕ್ಕೆ ಒಂದು ಸಾವಿರ ಕೋಟಿ ರೂ ಅನುದಾನ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಕೆ.ಆರ್.ಪೇಟೆ ತಾಲೂಕು ಅಧ್ಯಕ್ಷ, ವಕೀಲ ವಿ.ಎಸ್.ಧನಂಜಯ್‌ಕುಮಾರ್ ಆಗ್ರಹಿಸಿದರು.ರಾಜ್ಯದಲ್ಲಿ ಮೂರು ಕೋಟಿಗೂ ಅಧಿಕವಾಗಿ ವೀರಶೈವ ಲಿಂಗಾಯತ ಸಮಾಜದವರಿದ್ದಾರೆ. ಈ ಪೈಕಿ ಶೇ.70ರಷ್ಟು ಜನರು ಬಡವರಾಗಿದ್ದಾರೆ. ಪರಿಣಾಮ ಶೈಕ್ಷಣಿಕ, ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸಮುದಾಯಕ್ಕೆ ಶಕ್ತಿ ತುಂಬಲು ಸಿಎಂ ಬಿ.ಎಸ್.ಯಡಿಯೂರಪ್ಪ ಕ್ರಮ ವಹಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಹಾಗೂ ಬಿಎಸ್‌ವೈ ಕುಟುಂಬ ರಾಜಕಾರಣಕ್ಕೆ ಏಳಿಗೆ ಸಾಧಿಸಲು ಸಮುದಾಯದ ಸಹಕಾರ ಹೆಚ್ಚಿದೆ. ಉಪ ಚುನಾವಣೆಯಲ್ಲಿಯೂ ಇದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯದಲ್ಲಿಯೂ ಸಮುದಾಯಕ್ಕೆ ಮೀಸಲಾಗಿ ಒದಗಿಸಬೇಕು. ಈ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರು ಬರೆದಿರುವ ಪತ್ರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.ಜಿಲ್ಲಾ ವೀರಶೈವ ಲಿಂಗಾಯತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಎಂ.ಗುರುಪ್ರಸಾದ್, ವೀರಪ್ಪ, ಎಂ.ಎಸ್.ಗಂಗಾಧರ್, ದಿನೇಶ್, ಶೀಲಾ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + thirteen =
Remember me
